ಉತ್ತರ ಪ್ರದೇಶದ ಲಕ್ನೋದಲ್ಲಿ ಇಂದು 19 ವರ್ಷದ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿದ್ದಾಳೆ.
ಲಕ್ನೋದ ಡಾ.ರಾಮ್ ಮನೋಹರ್ ಲೋಹಿಯಾ ಕಾನೂನು ವಿಶ್ವವಿದ್ಯಾಲಯದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅನಿಕಾ ರಸ್ತೋಗಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದ್ದಾರೆ.
ಅನಿಕಾ ಹಾಸ್ಟೆಲ್‌ನಲ್ಲಿ ಕೊಠಡಿಯ ಬಾಗಿಲು ತೆರೆಯದಿದ್ದಾಗ ಕೊಠಡಿಯ ಬಾಗಿಲು ಒಡೆದು ನೋಡಿದಾಗ ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ಮೂರನೇ ವರ್ಷದ ಎಲ್‌ಎಲ್‌ಬಿ ವಿದ್ಯಾರ್ಥಿನಿಯಾಗಿರುವ ಅನಿಕಾ, ಪ್ರಸ್ತುತ ದೆಹಲಿಯ ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ(ಎನ್‌ಐಎ) ಇನ್‌ಸ್ಪೆಕ್ಟರ್ ಜನರಲ್ ಆಗಿ ಸೇವೆ ಸಲ್ಲಿಸುತ್ತಿರುವ ಐಪಿಎಸ್ ಅಧಿಕಾರಿ ಸಂತೋಷ್ ರಸ್ತೋಗಿ ಅವರ ಪುತ್ರಿಯಾಗಿದ್ದಾಳೆ.
ನಿನ್ನೆ ತಡರಾತ್ರಿ ಆಕೆ ಹಾಸ್ಟೆಲ್ ಕೋಣೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಕ್ಷಣ ಆಕೆಯನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದರು. ಆಕೆಯ ಸಾವಿಗೆ ಕಾರಣ ಅಸ್ಪಷ್ಟವಾಗಿದ್ದು, ಆಶಿಯಾನಾ ಪೊಲೀಸರು ತನಿಖೆ ಆರಂಭಿಸಿದ್ದಾರೆ.