alex Certify ಚಂದ್ರಗ್ರಹಣ : ನಾಳೆ ರಾಜ್ಯದ ಈ ಪ್ರಮುಖ ದೇವಾಲಯಗಳ ದರ್ಶನದ ಸಮಯದಲ್ಲಿ ಬದಲಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಂದ್ರಗ್ರಹಣ : ನಾಳೆ ರಾಜ್ಯದ ಈ ಪ್ರಮುಖ ದೇವಾಲಯಗಳ ದರ್ಶನದ ಸಮಯದಲ್ಲಿ ಬದಲಾವಣೆ

ಬೆಂಗಳೂರು : ಅಕ್ಟೋಬರ್ 28 ರ ನಾಳೆ  ಈ ವರ್ಷದ ಕೊನೆಯ ಚಂದ್ರ ಗ್ರಹಣೂ ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ದೇವಾಲಯಗಳ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.

ಚಂದ್ರ ಗ್ರಹಣ ಹಿನ್ನೆಲೆ ಮೈಸೂರು ಚಾಮುಂಡೇಶ್ವರಿ ದೇಗುಲ, ಕುಕ್ಕೆ ಸುಬ್ರಹ್ಮಣ್ಯ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಸೇರಿದಂತೆ ಹಲವು ದೇವಸ್ಥಾನಗಳ ಸಮಯ ಬದಲಾವಣೆ ಮಾಡಲಾಗಿದೆ.

ನಾಳೆ ಸಂಜೆ 6ರ ಬಳಿಕ ನಾಡ ದೇವತೆ ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ.  ಭಾನುವಾರ ಬೆಳಗ್ಗೆ 7.30ಕ್ಕೆ ಮತ್ತೆ ದೇವಿಯ ದರ್ಶನಕ್ಕೆ ಅವಕಾಶ ನೀಡಲಾಗಿದೆ ಎಂದು ಚಾಮುಂಡಿ ಬೆಟ್ಟದ ಆಡಳಿತ ಮಂಡಳಿ ಅಧಿಕಾರಿ ಸಿ.ಜಿ.ಕೃಷ್ಣ ಮಾಹಿತಿ ನೀಡಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ರಾತ್ರಿಯ ಮಹಾಪೂಜೆ ಸಂಜೆ 6.30ಕ್ಕೆ ಮುಕ್ತಾಯವಾಗಲಿದ್ದು ಬಳಿಕ ದೇವರ ದರ್ಶನ ಮತ್ತು ರಾತ್ರಿಯ ಅನ್ನದಾನ ಇರುವುದಿಲ್ಲ. ಸಂಜೆ ನಡೆಯುವ ಆಶ್ಲೇಷ ಬಲಿ ಸೇವೆಯು ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಉಡುಪಿಯ ಕೃಷ್ಣಮಠದಲ್ಲಿ ಶ್ರೀ ಕೃಷ್ಣನ ದರ್ಶನಕ್ಕೆ ಸಮಯ ಬದಲಾವಣೆ ಮಾಡಲಾಗಿದೆ. ನಾಳೆ ಸಂಜೆ 4 ಗಂಟೆಯ ನಂತರ ಊಟದ ವ್ಯವಸ್ಥೆ ಸ್ಥಗಿತಗೊಳಿಸಲಾಗಿದೆ.

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ, ರಾತ್ರಿಯ ಮಹಾಪೂಜೆ ಸಂಜೆ 6.30ರ ಒಳಗೆ ಮುಗಿಯುತ್ತದೆ. ಆದರೆ ದರ್ಶನ ಸಮಯದಲ್ಲಿ ಬದಲಾವಣೆ ಇಲ್ಲ.

ವರ್ಷದ ಕೊನೆಯ ಚಂದ್ರಗ್ರಹಣವು ಅಕ್ಟೋಬರ್ 28 ರ ಶನಿವಾರ ಮಧ್ಯರಾತ್ರಿ ಸಂಭವಿಸಲಿದ್ದು, ಇದು ಮಧ್ಯಾಹ್ನ 1.05 ಕ್ಕೆ ಪ್ರಾರಂಭವಾಗಿ ಮುಂಜಾನೆ 2.24 ಕ್ಕೆ ಕೊನೆಗೊಳ್ಳುತ್ತದೆ.

ಚಂದ್ರಗ್ರಹಣ 2023ರ ಸಮಯ

2023 ರಲ್ಲಿ, ಗ್ರಹಣ ಸಮಯವು ಬೆಳಿಗ್ಗೆ 1:06 ರಿಂದ ಮಧ್ಯಾಹ್ನ 2:22 ರವರೆಗೆ ಇರುತ್ತದೆ.

ಚಂದ್ರಗ್ರಹಣದ ಒಟ್ಟು ಅವಧಿ 1 ಗಂಟೆ 16 ನಿಮಿಷಗಳು.

2023 ರಲ್ಲಿ, ಕೊನೆಯ ಚಂದ್ರ ಗ್ರಹಣವು ಅಶ್ವಿನ್ ತಿಂಗಳ ಶರದ್ ಪೂರ್ಣಿಮಾ ದಿನದಂದು ಸಂಭವಿಸಲಿದೆ.

ಚಂದ್ರ ಗ್ರಹಣ ಸೂತಕ ಅವಧಿ (ಚಂದ್ರ ಗ್ರಹಣ ಸೂತಕ ಅವಧಿ)

2023 ರ ಚಂದ್ರ ಗ್ರಹಣವು ಮಧ್ಯಾಹ್ನ 3:15 ಕ್ಕೆ ಪ್ರಾರಂಭವಾಗಲಿದೆ

ಅದೇ ಸಮಯದಲ್ಲಿ, ಸೂತಕ ಅವಧಿಯು ಮುಂಜಾನೆ 2: 22 ಕ್ಕೆ ಕೊನೆಗೊಳ್ಳುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...