ಶರತ್ ಎಸ್ ನಿರ್ದೇಶನದ ಅರ್ಜುನ್ ಅಭಿನಯದ “ಗನ್ಸ್ ಅಂಡ್ ರೋಸಸ್” ಚಿತ್ರದ ‘108ಗೆ ಫೋನ್ ಮಾಡ್ಲ’ ಎಂಬ ಲಿರಿಕಲ್ ಹಾಡು ಲಹರಿ ಮ್ಯೂಸಿಕ್ ಯುಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾಗಿದೆ. ವಿಜಯ್ ಪ್ರಕಾಶ್ ಮತ್ತು ಜಿ ಕಲ್ಯಾಣ ಈ ಹಾಡಿಗೆ ಧ್ವನಿಯಾಗಿದ್ದು, ಶಶಿಕುಮಾರ್ ಸಂಗೀತ ಸಂಯೋಜನೆ ನೀಡಿದ್ದಾರೆ. ಇನ್ನುಳಿದಂತೆ ಅರುಣ್ ಕುಮಾರ್ ಗಜೇಂದ್ರಗಡ ಸಾಹಿತ್ಯ ಬರೆದಿದ್ದಾರೆ.
ಈ ಚಿತ್ರವನ್ನು ದ್ರೋಣ ಕ್ರಿಯೇಷನ್ಸ್ ಬ್ಯಾನರ್ ನಲ್ಲಿ ಎಚ್ ಆರ್ ನಟರಾಜ್ ನಿರ್ಮಾಣ ಮಾಡಿದ್ದು, ಅರ್ಜುನ್ ಸೇರಿದಂತೆ ಯಶವಿಕಾ ನಿಷ್ಕಲಾ, ಕಿಶೋರ್, ಅವಿನಾಶ್, ಶೋಭರಾಜ್, ಸುಚೇಂದ್ರ ಪ್ರಸಾದ್, ನೀನಾಸಂ ಅಶ್ವಥ್ ಬಣ್ಣ ಹಚ್ಚಿದ್ದಾರೆ. ಸಂಜೀವ್ ರೆಡ್ಡಿ ಸಂಕಲನ, ಆರ್ ಜನಾರ್ಧನ್ ಛಾಯಾಗ್ರಹಣ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಹಾಗೂ ಧನಂಜಯ್ ನೃತ್ಯ ನಿರ್ದೇಶನವಿದೆ.