ಈಗಾಗಲೇ ತನ್ನ ಟೈಟಲ್ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ವಿನಯ್ ನಿರ್ದೇಶನದ ‘ದಿ’ ಚಿತ್ರದ ‘ಧೀರ’ ಎಂಬ ಮೆಲೋಡಿ ಹಾಡು ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಮೋನಿಷಾ ಸುರೇಂದ್ರನ್ ಈ ಹಾಡಿಗೆ ಧ್ವನಿಯಾಗಿದ್ದು, ಸ್ಟೀವನ್ ಸತೀಶ್ ಸಂಗೀತ ಸಂಯೋಜನೆ ನೀಡಿದ್ದಾರೆ. ವಿನಯ್ ಸಾಹಿತ್ಯವಿದೆ.
ಈ ಚಿತ್ರದಲ್ಲಿ ವಿನಯ್ ಮತ್ತು ದಿಶಾ ರಮೇಶ್ ಪ್ರಮುಖ ಪಾತ್ರದಲ್ಲಿದ್ದು, ನಾಗೇಂದ್ರ, ಬಾಲರಾಜ್ವಾಡಿ, ಹರಿಣಿ, ಕಾಮಿಡಿ ಕಿಲಾಡಿಗಳು ಚಂದ್ರು, ಶರಣ್, ಅಭಯ್ ಗಣೇಶ್, ಕಲಾರತಿ ಮಹದೇವ್, ಉಳಿದ ಪಾತ್ರ ವರ್ಗದಲ್ಲಿದ್ದಾರೆ. Vdk ಸಿನಿಮಾಸ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಲಾಗಿದ್ದು, ಸಿದ್ದಾರ್ಥ್ ಆರ್ ನಾಯಕ್ ಸಂಕಲನ, ಅಲೆನ್ ಭರತ್ ಛಾಯಾಗ್ರಹಣವಿದೆ. ಇನ್ನುಳಿದಂತೆ ಚಂದ್ರು ಸಾಹಸ ನಿರ್ದೇಶನವಿದೆ.