alex Certify ‘ತೋತಾಪುರಿ 2’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ತೋತಾಪುರಿ 2’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ಕಳೆದ ವರ್ಷ ಬಿಡುಗಡೆಯಾಗಿ ಪ್ರೇಕ್ಷಕರ ಗಮನ ಸೆಳೆದಿದ್ದ ತೋತಾಪುರಿ ಸಿನಿಮಾದ ಮತ್ತೊಂದು ಭಾಗ ಇನ್ನೇನು ಬಿಡುಗಡೆಗೆ ಸಿದ್ಧವಾಗಿದೆ.

ನಿನ್ನೆ ‘ತೋತಾಪುರಿ 2’ ಚಿತ್ರದ ಲಿರಿಕಲ್ ಸಾಂಗ್ ಅನ್ನು ಮೋನಿಪ್ಲಿಕ್ಸ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ‘ಕಣ್ಣಾಗೆ ಇರ್ತಾವ್ನೆ ಈರೇಗೌಡ’ ಎಂಬ ಈ ಹಾಡಿಗೆ ಹೇಮಂತ್ ಕುಮಾರ್ ಧ್ವನಿಯಾಗಿದ್ದು, ಅರುಣ್  ಸಂಗೀತ ಸಂಯೋಜನೆ ಮಾಡಿದ್ದಾರೆ.  ಹೃದಯಶಿವ ಅವರ ಸಾಹಿತ್ಯವಿದೆ.

ವಿಜಯ್ ಪ್ರಸಾದ್ ನಿರ್ದೇಶನದ ರೋಮ್ಯಾಂಟಿಕ್ ಕಾಮಿಡಿ ಕಥಾಂದರ ಹೊಂದಿರುವ ಈ ಚಿತ್ರದಲ್ಲಿ ನವರಸ ನಾಯಕ ಜಗ್ಗೇಶ್ ಸೇರಿದಂತೆ ಅದಿತಿ ಪ್ರಭುದೇವ, ಸುಮನ್ ರಂಗನಾಥ್, ಡಾಲಿ ಧನಂಜಯ್  ಬಣ್ಣ ಹಚ್ಚಿದ್ದಾರೆ. ಸುರೇಶ್ ಆರ್ಟ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಮೋನಿ ಪ್ಲಿಕ್ಸ್ ಸ್ಟುಡಿಯೋಸ್ ಲಾಂಛನದಲ್ಲಿ ಕೆ ಸುರೇಶ್ ನಿರ್ಮಾಣ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...