alex Certify BIG NEWS: ಸಚಿವ ಎಂ.ಬಿ.ಪಾಟೀಲ್ ವಿರುದ್ಧ ರಾಜ್ಯಪಾಲರಿಗೆ ದೂರು: ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಚಿವ ಎಂ.ಬಿ.ಪಾಟೀಲ್ ವಿರುದ್ಧ ರಾಜ್ಯಪಾಲರಿಗೆ ದೂರು: ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಮನವಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆನ್ನಲ್ಲೇ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದ್ದು, ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ
ಮನವಿ ಮಾಡಲಾಗಿದೆ.

ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ.

ಸಚಿವ ಎಂ.ಬಿ.ಪಾಟೀಲ್, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಭೂಮಿಯನ್ನು ಕಾನೂನು ಬಾಹಿರವಗಿ ಹಂಚಿಕೆ ಮಾಡಿದ್ದಾರೆ. ನಿಯಮಗಳ ಪ್ರಕಾರ ಆನ್ ಲೈನ್ ನಲ್ಲಿ ಪ್ರಕ್ರಿಯೆ ನಡೆಸಬೇಕಿತ್ತು. ಆದರೆ ಹಾಗೆ ಮಾಡದೆ ಕೈಗಾರಿಕಾ ಸಚಿವರ ಕಂಪನಿಗಳಿಗೆ ಭೂಮಿ ಹಂಚಲಾಗಿದೆ. ಬಿಡದಿ, ವಸಂತನರಸಾಪುರ, ಕೋಲಾರ, ನರಸಾಪುರ, ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶಗಳಲ್ಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದ್ದು, ಕಾನುನು ಬಾಹಿರವಾಗಿ ನಿವೇಶನ ಹಂಚಲಾಗಿದೆ. ಇದಕ್ಕೆ ಕೆಲ ಅಧಿಕಾರಿಗಳು ಸಾಥ್ ನೀಡಿದ್ದಾರೆ. ಇದರಿಂದಾಗಿ ಕೆಐಎಡಿಬಿಗೆ ಕೋಟ್ಯಂತರ ರೂಪಾಯಿ ನಷ್ಟವುಂಟಾಗಿದೆ. ಈ ಹಿನ್ನೆಲೆಯಲ್ಲಿ ಸಚಿವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವತೆ ದೂರು ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...