
ಮೈಸೂರು: ಲಿಂಗಾಯತರಲ್ಲಿ ಪರ್ಯಾಯ ನಾಯಕರು ಇಲ್ಲ ಎನ್ನುವುದು ಸುಳ್ಳು. ಲಿಂಗಾಯತರಲ್ಲಿ ಪರ್ಯಾಯ ನಾಯಕರೂ ಇದ್ದಾರೆ ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅತಿ ದೊಡ್ಡ ನಾಯಕರು ಅದರಲ್ಲಿ ಅನುಮಾನವೇ ಇಲ್ಲ. ಆದರೆ, ಪರ್ಯಾಯ ನಾಯಕರಿಲ್ಲ ಎಂಬುದನ್ನು ನಾನು ಒಪ್ಪುವುದಿಲ್ಲ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ನಾನು, ಶರಣಪ್ರಕಾಶ ಪಾಟೀಲ, ಈಶ್ವರ ಖಂಡ್ರೆ ಸೇರಿದಂತೆ ಹಲವು ಲಿಂಗಾಯತ ನಾಯಕರು ಇದ್ದೇವೆ. ಬಿಜೆಪಿಯಲ್ಲಿ ಜಗದೀಶ್ ಶೆಟ್ಟರ್, ಉಮೇಶ್ ಕತ್ತಿ, ಬಸನಗೌಡ ಪಾಟೀಲ್ ಯತ್ನಾಳ್, ಸೋಮಣ್ಣ ಸೇರಿದಂತೆ ಹಲವು ನಾಯಕರು ಇದ್ದಾರೆ ಎಂದರು.
ಮುಖ್ಯಮಂತ್ರಿ ಸ್ಥಾನದ ಚರ್ಚೆ ಕುರಿತಂತೆ ಪ್ರತಿಕ್ರಿಯೆ ನೀಡಿ, ನಾನೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಸ್ವಯಂ ಘೋಷಣೆ ಸರಿಯಲ್ಲ. ಸ್ವಯಂ ಘೋಷಣೆ ಮಾಡಿಕೊಂಡವರೆಲ್ಲರೂ ಮುಖ್ಯಮಂತ್ರಿಯಲ್ಲ ಎಂದು ತಿಳಿಸಿದರು.