ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರವಾಗಿ ಕಿಡಿಕಾರಿರುವ ಸಚಿವ ಎಂ.ಬಿ.ಪಾಟೀಲ್, ರಾಜ್ಯಪಾಲರಿಂದ ಇದನ್ನು ನಿರೀಕ್ಷಿಸಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್, ಸಂಪುಟದಲ್ಲಿ ನಿರ್ಣಯ ಮಾಡಿ ಸುದೀರ್ಘವಾಗಿ ಉತ್ತರ ನೀಡಿದ್ದೇವೆ. ಆದರೂ ತರಾತುರಿಯಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಸರಿಯಲ್ಲ. ಈ ಹಿಂದೆ ಸಚಿವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದಾಗ ಕೊಡಲಿಲ್ಲ. ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ 9 ತಿಂಗಳಿಂದ ಆರೋಪವಿದೆ. ಇದ್ಯಾವುದೂ ರಾಜ್ಯಪಾಲರಿಗೆ ಮುಖ್ಯ ಅನಿಸಲಿಲ್ವಾ? ಎಂದು ಪ್ರಶ್ನಿಸಿದ್ದಾರೆ.
ಮುಡಾದಲ್ಲಿ ನಿರ್ಣಯವಾದಂತೆ ಸೈಟ್ ಹಂಚಲಾಗಿದೆ. ರಾಜ್ಯಪಾಲರು ಕೇಂದ್ರದ ಕೈಗೊಂಭೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.