ಬೆಂಗಳೂರು: ಬಿಜೆಪಿ-ಜೆಡಿಎಸ್ ಜಂಟಿ ಪಾದಯಾತ್ರೆಗೆ ಸಚಿವ ಎಂ.ಬಿ.ಪಾಟೀಲ್ ತಿರುಗೇಟು ನೀಡಿದ್ದಾರೆ. ಯಾರು ಸರ್ಕಾರವನ್ನು ಬೀಳಿಸಿದರೋ ಅವರ ಜೊತೆ ಸೇರಿ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್, ಅಂದು ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವಿದ್ದಾಗ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರ್ಕಾರ ಬೀಳಿಸಿದವರು ಬಿಜೆಪಿ ನಾಯಕರು. ನಾವು ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ್ದೆವು. ಆದರೆ ಸರ್ಕಾರ ಬೀಳಿಸಿ ಬಿಜೆಪಿಯವರು ಅಧಿಕಾರಕ್ಕೆ ಬಂದರು. ಸರ್ಕಾರವನ್ನು ಬೀಳಿಸಿದ ಬಿಜೆಪಿಯವರ ಜೊತೆ ಸೇರಿ ಇಂದು ಪಾದಯಾತ್ರೆ ಮಾಡುತ್ತಿದ್ದಾರೆ. ಹೆಚ್.ಡಿ.ಕೆ ಅವರದ್ದು ಅವಕಾಶವಾದಿ ಪಾದಯಾತ್ರೆ.
ಬೆಂಗಳೂರಿನಿಂದ ಮೈಸೂರುವರೆಗೆ ಪಾದಯಾತ್ರೆ ತೆರಳಲು ಕುಮಾರಸ್ವಾಮಿಯವರಿಗೆ ಇಷ್ಟವಿಲ್ಲ. ಆದರೂ ಒಲ್ಲದ ಮನಸ್ಸಿನಿಂದ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.