ಬೆಂಗಳೂರು: ಆಪರೇಷನ್ ಕಮಲ ಮಾಡಬೇಕಾದರೆ 65 ಶಾಸಕರು ಬೇಕು. ಬಿಜೆಪಿಗೆ ಅಷ್ಟು ಶಾಸಕರು ಸಿಗ್ತಾರಾ? 5 ಶಾಸಕರು ಕೂಡ ಸಿಗಲ್ಲ ಎಂದು ಸಚಿವ ಎಂ.ಬಿ.ಪಾಟೀಲ್ ಟಾಂಗ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಆಪರೇಷನ್ ಕಮಲ ಬಳಿಕ ಬಿಜೆಪಿ ಕಥೆ ಏನಾಗಿದೆ ಅಂತ ಗೊತ್ತಿದೆಯಲ್ಲ. ಬಿಜೆಪಿ ಮುಳುಗುತ್ತಿರುವ ಹಡಗಲ್ಲ, ಈಗಾಗಲೇ ಮುಳುಗಿರುವ ಹಡಗು. ಬಿಜೆಪಿಯಲ್ಲಿ ನಾಯಕರಿಲ್ಲ ಎಂದು ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ. ನಾಯಕರಷ್ಟೇ ಅಲ್ಲ ಏನೂ ಉಳಿದಿಲ್ಲ. ಬಿಜೆಪಿ ಸಂಪೂರ್ಣ ನಿರ್ನಾಮವಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಇದೇ ವೇಳೆ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭೇಟಿ ವಿಚಾರವಾಗಿ ಮಾತನಾಡಿದ ಸಚಿವರು, ವೈಯಕ್ತಿಕ ಭೇಟಿಯೋ, ರಾಜಕೀಯ ಭೇಟಿಯೋ ಎಂಬ ಬಗ್ಗೆ ನನಗೆ ಗೊತ್ತಿಲ್ಲ ರಮೇಶ್ ಜಾರಕಿಹೊಳಿಗೆ ಕಾಂಗ್ರೆಸ್ ಸೇರುವ ಒಲವಿರಬಹುದು. ಬೇರೆ ಪಕ್ಷದ ನಾಯಕರು ಕಾಂಗ್ರೆಸ್ ಸೇರುವ ಬಗ್ಗೆ ವರಿಷ್ಠರು ನಿರ್ಧರಿಸುತ್ತಾರೆ ಎಂದು ಹೇಳಿದರು.