ಬೆಂಗಳೂರು: ತಮಿಳುನಾಡಿಗೆ ಮತ್ತೆ 15 ದಿನಗಳ ಕಾಲ 5000 ಕ್ಯೂಸೆಕ್ ಕಾವೇರಿ ನೀರು ಬಿಡುವಂತೆ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ನೀಡಿರುವ ಆದೇಶ ದುರದೃಷ್ಟಕರ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್, ಸುಪ್ರೀಂಕೋರ್ಟ್ ತೀರ್ಪು ದುರದೃಷ್ಟಕರ. ನಮಗೆ ನೀರಿಲ್ಲ, ಇಂತಹ ಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡುವುದು ಕಷ್ಟ. ನಮಗೆ ಸಂಕಷ್ಟ ಸೂತ್ರವಿಲ್ಲ ವೈಜ್ಞಾನಿಕ ಸೂತ್ರ ಮಾಡಬೇಕು ಎಂದು ಹೇಳಿದರು.
ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದು. ಕಾವೇರಿ ನದಿ ನೀರಿನ ವಿಚಾರವಾಗಿ ಕೇಂದ್ರ ಜಲಶಕ್ತಿ ಇಲಾಖೆ, ಪ್ರಾಧಿಕಾರ ಮಧ್ಯಪ್ರವೇಶ ಮಾಡಬೇಕು. ತಜ್ಞರ ತಂಡ ಕರೆಸಿ ಪರಿಶೀಲನೆ ನಡೆಸಲಿ. ನಂತರ ನೀರು ಬಿಡುವ ಬಗ್ಗೆ ತೀರ್ಮಾನ ಮಾಡಬೇಕು ಎಂದು ಹೇಳಿದರು.