ಬೆಂಗಳೂರು: 2025ರ ಪುರುಷರ ಹಾಗೂ ಮಹಿಳಾ ಖೋ ಖೋ ವಿಶ್ವಕಪ್‌ನಲ್ಲಿ ಅತ್ಯುತ್ತಮ ಆಟವಾಡಿ ಭಾರತ ತಂಡವು ಎರಡೂ ವಿಭಾಗದಲ್ಲಿ ವಿಶ್ವ ಚಾಂಪಿಯನ್ ಆಗಿದೆ.
ಭಾರತ ತಂಡ ಚಾಂಪಿಯನ್ ಆಗಲು ಪ್ರಮುಖ ಪಾತ್ರ ವಹಿಸಿದ ಮಂಡ್ಯ ಜಿಲ್ಲೆಯ ಡಿ.ಮಲ್ಲಿಗೆರೆ ಗ್ರಾಮದ ಎಂ.ಕೆ ಗೌತಮ್ ಹಾಗೂ ಮೈಸೂರು ಜಿಲ್ಲೆಯ ಟಿ.ನರಸೀಪುರದ ಕುರಬೂರಿನ ಚೈತ್ರಾ ಅವರನ್ನು ಸಿಎಂ ಸಿದ್ಧರಾಮಯ್ಯ ಸನ್ಮಾನಿಸಿದ್ದಾರೆ.
ಇಬ್ಬರಿಗೂ ತಲಾ 5 ಲಕ್ಷ ರೂಪಾಯಿಯ ಬಹುಮಾನ ಘೋಷಿಸಿದ ಸಿಎಂ ಗೌತಮ್ ಮತ್ತು ಚೈತ್ರಾ ಅವರ ಕ್ರೀಡಾ ಬದುಕು ಮತ್ತಷ್ಟು ಯಶಸ್ಸುಗಳಿಂದ ಕೂಡಿರಲಿ ಎಂದು ಶುಭ ಹಾರೈಸಿದ್ದಾರೆ.