ಬೆಂಗಳೂರು : ರಾಜ್ಯದಲ್ಲಿ ಮಾ. 3 ರಿಂದ 6ರವರೆಗೆ ಪಲ್ಸ್ ಪೋಲಿಯೊ ಅಭಿಯಾನ ನಡೆಯಲಿದ್ದು, ಪೋಷಕರು ತಪ್ಪದೇ ಮಕ್ಕಳಿಗೆ ಲಸಿಕೆ ಹಾಕಿಸಬೇಕು ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
ರಾಜ್ಯದಲ್ಲಿ ಮಾರ್ಚ್ 3 ರಿಂದ 6ರವರೆಗೆ ಪಲ್ಸ್ ಪೋಲಿಯೊ ಅಭಿಯಾನ ನಡೆಯಲಿದೆ. ಸಾರ್ವಜನಿಕರು ನಿಮ್ಮ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ತಪ್ಪದೇ ಪೋಲಿಯೊ ಲಸಿಕೆ ಹಾಕಿಸಿ ಪೋಲಿಯೊ ಮುಕ್ತ ಭಾರತ ಮುನ್ನಡೆಯಲು ಸಹಕರಿಸಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ.
ಹಾಗೂ ರಾಜ್ಯದ ಹದಿಹರೆಯದ ವಿದ್ಯಾರ್ಥಿನಿಯರ ಆರೋಗ್ಯ ಕಾಳಜಿಗಾಗಿ ಉಚಿತ ಸ್ಯಾನಿಟರಿ ನ್ಯಾಪ್ಕಿನ್ ವಿತರಿಸುವ ಸರ್ಕಾರದ ಮಹತ್ತರ ʼಶುಚಿ – ಮುಟ್ಟಿನ ನೈರ್ಮಲ್ಯ ಯೋಜನೆʼಗೆ ಮರುಚಾಲನೆ ನೀಡಲಾಗಿದೆ. ಈ ಯೋಜನೆ ಅಡಿಯಲ್ಲಿ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳು ಹಾಗೂ ವಸತಿ ನಿಲಯಗಳಲ್ಲಿನ ವಿದ್ಯಾರ್ಥಿನಿಯರಿಗೆ ಉಚಿತ ʼಶುಚಿ ಸ್ಯಾನಿಟರಿ ನ್ಯಾಪ್ಕಿನ್ʼಗಳ ವಿತರಣೆ ಮಾಡಲಾಗುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.