ದಾವಣಗೆರೆ: ಜಾಮೀನಿನ ಮೇಲೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಿಡುಗಡೆಯಾದ ಹಿನ್ನೆಲೆಯಲ್ಲಿ ಅವರ ಪುತ್ರ ಮಲ್ಲಿಕಾರ್ಜುನ ಬೆಂಬಲಿಗರ ಸಭೆ ಕರೆದಿದ್ದಾರೆ.
ಮಾಡಾಳ್ ವಿರೂಪಾಕ್ಷಪ್ಪ ಅವರ ಸ್ವಗ್ರಾಮ ಚನ್ನಗಿರಿ ತಾಲೂಕಿನ ಚನ್ನೇಶಪುರದಲ್ಲಿ ಸಭೆ ಕರೆಯಲಾಗಿದೆ. ಪಕ್ಷೇತರರಾಗಿ ಸ್ಪರ್ಧಿಸುವ ಬಗ್ಗೆ ತಂದೆ ಮತ್ತು ಬೆಂಬಲಿಗರ ಜೊತೆ ಚರ್ಚಿಸಿ ಮಾಡಾಳು ಮಲ್ಲಿಕಾರ್ಜುನ ಇಂದೇ ತೀರ್ಮಾನ ಕೈಗೊಳ್ಳಲಿದ್ದಾರೆ.
ಚನ್ನಗಿರಿ ಕ್ಷೇತ್ರದಿಂದ ಮಾಡಾಳ್ ಮಲ್ಲಿಕಾರ್ಜುನ ಬಿಜೆಪಿ ಟಿಕೆಟ್ ಕೇಳಿದ್ದರು. ಆದರೆ, ಅವರಿಗೆ ಟಿಕೆಟ್ ಕೈತಪ್ಪಿದ್ದು, ಹೆಚ್.ಎಸ್. ಶಿವಕುಮಾರ್ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಮಲ್ಲಿಕಾರ್ಜುನ ಇಂದು ತಂದೆ ಮತ್ತು ಬೆಂಬಲಿಗರೊಂದಿಗೆ ಸೇರಿ ಪಕ್ಷೇತರರಾಗಿ ಸ್ಪರ್ಧಿಸುವ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.