ದಾವಣಗೆರೆ: ದಾವಣಗೆರೆ ಜಿಲ್ಲೆಯ ಚನ್ನಗಿರಿ ವಿಧಾನಸಭೆ ಕ್ಷೇತ್ರದ ಚುನಾವಣೆ ಅಖಾಡ ರಂಗೇರಿದೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ತೇಜಸ್ವಿ ಪಟೇಲ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಜೆಡಿಎಸ್ ಸೇರ್ಪಡೆಯಾಗಿದ್ದಾರೆ.
ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ತೇಜಸ್ವಿ ಪಟೇಲ್ ನಂತರದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರನ್ನು ಭೇಟಿಯಾಗಿ ಜೆಡಿಎಸ್ ನಿಂದ ಸ್ಪರ್ಧಿಸಲು ಟಿಕೆಟ್ ಪಡೆದುಕೊಂಡಿದ್ದಾರೆ.
ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳು ಮಲ್ಲಿಕಾರ್ಜುನ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ. ಮಾಡಾಳ್ ಕುಟುಂಬದ ಬೆಂಬಲಿಗರ ಸ್ವಾಭಿಮಾನಿ ಸಂಕಲ್ಪ ಸಭೆಯಲ್ಲಿ ಬೆಂಬಲಿಗರೊಂದಿಗೆ ಚರ್ಚೆ ನಡೆಸಿದ ಮಾಡಾಳ್ ಮಲ್ಲಿಕಾರ್ಜುನ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದು, ಏಪ್ರಿಲ್ 20ರಂದು ಸಾವಿರಾರು ಅಭಿಮಾನಿಗಳೊಂದಿಗೆ ನಾಮಪತ್ರ ಸಲ್ಲಿಸಲಿದ್ದಾರೆ. ಸೋಮವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದ್ದಾರೆ.