
ದಾವಣಗೆರೆ: ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಮಲ್ಲಿಕಾರ್ಜುನ ಅವರನ್ನು ಬಿಜೆಪಿಯಿಂದ ಆರು ವರ್ಷ ಉಚ್ಚಾಟನೆ ಮಾಡಲಾಗಿದೆ.
ಮಾಡಾಳ್ ಮಲ್ಲಿಕಾರ್ಜುನ ಚನ್ನಗಿರಿ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಮಲ್ಲಿಕಾರ್ಜುನ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಹಿನ್ನೆಲೆಯಲ್ಲಿ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. ದಾವಣಗೆರೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಹನಗವಾಡಿ ವೀರೇಶ್ ಮಾಹಿತಿ ನೀಡಿದ್ದಾರೆ.