ಬೆಂಗಳೂರು: ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
40 ಲಕ್ಷ ರೂಪಾಯಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದರು. ಪ್ರಕರಣದಲ್ಲಿ ಆರೋಪಿಯಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಇಂದು ಬಂಧಿಸಲಾಗಿದೆ. ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಲಾಗಿದೆ.
ತುಮಕೂರಿನ ಕ್ಯಾತಸಂದ್ರ ಟೋಲ್ ನಲ್ಲಿ ಅವರನ್ನು ಬಂಧಿಸಲಾಗಿದೆ. ಬೆಂಗಳೂರಿನ ಕಡೆಗೆ ಇನೋವಾ ಕಾರ್ ನಲ್ಲಿ ಬರುತ್ತಿದ್ದ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಲಾಗಿದೆ. ಹೈಕೋರ್ಟ್ ಏಕ ಸದಸ್ಯ ಪೀಠದಿಂದ ಜಾಮೀನು ಅರ್ಜಿ ವಜಾಗೊಳಿಸುತ್ತಿದ್ದಂತೆ ನಾಪತ್ತೆಯಾಗಿದ್ದ ಮಾಡಾಳು ವಿರೂಪಾಕ್ಷಪ್ಪ ಬೆಂಗಳೂರು ಕಡೆಗೆ ಪ್ರಯಾಣ ಬೆಳೆಸಿದ್ದರು. ತುಮಕೂರಿನ ಕ್ಯಾತ್ಸಂದ್ರ ಬಳಿ ಅವರನ್ನು ಬಂಧಿಸಲಾಗಿದೆ.