
ದಾವಣಗೆರೆ: ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರಿಂದ ಕೇಸ್ ದಾಖಲಾಗ್ತಿದ್ದಂತೆ ನಾಪತ್ತೆಯಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಕಾಂಗ್ರೆಸ್ ನಿಂದ ಮತ್ತೊಂದು ಅಭಿಯಾನ ಕೈಗೊಳ್ಳಲಾಗಿದೆ.
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮಾಡಾಳ್ ಮಿಸ್ಸಿಂಗ್ ಅಭಿಯಾನ ಕೈಗೊಂಡಿದ್ದಾರೆ. ದಾವಣಗೆರೆ ಮತ್ತು ಚನ್ನಗಿರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಾಡಾಳ್ ಮಿಸ್ಸಿಂಗ್ ಪೋಸ್ಟರ್ ಅಂಟಿಸಿದ್ದಾರೆ. ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಾಪತ್ತೆಯಾಗಿದ್ದಾರೆ ಎಂದು ಪೋಸ್ಟರ್ ಹಾಕಲಾಗಿದೆ. ಲೋಕಾಯುಕ್ತ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಡಾಳು ವಿರೂಪಾಕ್ಷಪ್ಪ ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.