alex Certify ‘ಮಾಡಾಳ್ ಮಿಸ್ಸಿಂಗ್’: ನಾಪತ್ತೆಯಾದ ಶಾಸಕನ ವಿರುದ್ಧ ಕಾಂಗ್ರೆಸ್ ಮತ್ತೊಂದು ಅಭಿಯಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಮಾಡಾಳ್ ಮಿಸ್ಸಿಂಗ್’: ನಾಪತ್ತೆಯಾದ ಶಾಸಕನ ವಿರುದ್ಧ ಕಾಂಗ್ರೆಸ್ ಮತ್ತೊಂದು ಅಭಿಯಾನ

ದಾವಣಗೆರೆ: ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರಿಂದ ಕೇಸ್ ದಾಖಲಾಗ್ತಿದ್ದಂತೆ ನಾಪತ್ತೆಯಾಗಿರುವ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಕಾಂಗ್ರೆಸ್ ನಿಂದ ಮತ್ತೊಂದು ಅಭಿಯಾನ ಕೈಗೊಳ್ಳಲಾಗಿದೆ.

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮಾಡಾಳ್ ಮಿಸ್ಸಿಂಗ್ ಅಭಿಯಾನ ಕೈಗೊಂಡಿದ್ದಾರೆ. ದಾವಣಗೆರೆ ಮತ್ತು ಚನ್ನಗಿರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಾಡಾಳ್ ಮಿಸ್ಸಿಂಗ್ ಪೋಸ್ಟರ್ ಅಂಟಿಸಿದ್ದಾರೆ. ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಾಪತ್ತೆಯಾಗಿದ್ದಾರೆ ಎಂದು ಪೋಸ್ಟರ್ ಹಾಕಲಾಗಿದೆ. ಲೋಕಾಯುಕ್ತ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಡಾಳು ವಿರೂಪಾಕ್ಷಪ್ಪ ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...