alex Certify ಮಾಡಾಳ್ ಪ್ರಕರಣದಲ್ಲಿ ಅನುಮಾನ ಮೂಡಿಸಿದ ಸರ್ಕಾರದ ನಡೆ…? ನಾಲ್ಕೇ ದಿನಕ್ಕೆ ತನಿಖಾಧಿಕಾರಿಗಳ ದಿಢೀರ್ ಬದಲಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಡಾಳ್ ಪ್ರಕರಣದಲ್ಲಿ ಅನುಮಾನ ಮೂಡಿಸಿದ ಸರ್ಕಾರದ ನಡೆ…? ನಾಲ್ಕೇ ದಿನಕ್ಕೆ ತನಿಖಾಧಿಕಾರಿಗಳ ದಿಢೀರ್ ಬದಲಾವಣೆ

ಬೆಂಗಳೂರು: ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪ್ರಕರಣದ ಇಬ್ಬರು ತನಿಖಾಧಿಕಾರಿಗಳನ್ನು ಬದಲಾವಣೆ ಮಾಡಲಾಗಿದೆ.

ಡಿವೈಎಸ್ಪಿ ಪ್ರಮೋದ್ ಕುಮಾರ್ ಮತ್ತು ಇನ್ಸ್ಪೆಕ್ಟರ್ ಕುಮಾರಸ್ವಾಮಿ ಅವರನ್ನು ಬದಲಾವಣೆ ಮಾಡಲಾಗಿದೆ. ಡಿವೈಎಸ್ಪಿ ಅಂಥೋಣಿ ಜಾನ್ ಮತ್ತು ಇನ್ಸ್ ಪೆಕ್ಟರ್ ಬಾಲಾಜಿಬಾಬು ಅವರುನ್ನು ನೇಮಕ ಮಾಡಲಾಗಿದೆ.

ತನಿಖೆ ಚುರುಕುಗೊಳ್ಳುತ್ತಿದ್ದಂತೆ ಅಧಿಕಾರಿಗಳ ಬದಲಾವಣೆ ಮಾಡಲಾಗಿದೆ. ಕೇವಲ ನಾಲ್ಕೇ ದಿನಕ್ಕೆ ಪ್ರಕರಣದ ಅಧಿಕಾರಿಗಳ ಬದಲಾವಣೆ ಮಾಡಲಾಗಿದೆ. ತನಿಖಾಧಿಕಾರಿಗಳ ಬದಲಾವಣೆ ಸಾಕಷ್ಟು ಅನುಮಾನ ಮೂಡಿಸಿದೆ. ಈ ಪ್ರಕರಣದಲ್ಲಿ ಎ1 ಆರೋಪಿ ಮಾಡಾಳ್ ವಿರೂಪಾಕ್ಷಪ್ಪ ಇನ್ನು ಪತ್ತೆಯಾಗಿಲ್ಲ. ಈ ನಡುವೆ ತನಿಖಾಧಿಕಾರಿಗಳ ಬದಲಾವಣೆ ಮಾಡಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...