ಬೆಂಗಳೂರು: ಕೆ.ಎಸ್.ಡಿ.ಎಲ್. ಟೆಂಡರ್ ಗಾಗಿ ಲಂಚ ಪಡೆದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ ದಾವಣಗೆರೆ ಜಿಲ್ಲೆ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಅರ್ಜಿ ವಿಚಾರಣೆ ನಡೆಸಲಾಗಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ವಿಚಾರಣೆ ನಡೆದಿದ್ದು, ಅರ್ಜಿ ವಿಚಾರಣೆ ಪೂರ್ಣಗೊಳಿಸಿದ ಕೋರ್ಟ್ ಆದೇಶ ಕಾಯ್ದಿರಿಸಿದೆ. ಏ. 15 ರಂದು ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.