ನವದೆಹಲಿ: ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಕೆ.ಎಸ್.ಡಿ.ಎಲ್. ರಾಸಾಯನಿಕ ತೈಲ ಪೂರೈಕೆ ಗುತ್ತಿಗೆ ಕಾರ್ಯಾದೇಶ ನೀಡಲು ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಡಿ ಮಾಡಾಳ್ ವಿರೂಪಾಕ್ಷಪ್ಪ ಅವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್ ಆದೇಶದ ವಿರುದ್ಧ ಲೋಕಾಯುಕ್ತ ಸಂಸ್ಥೆ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಸಂಜಯ್ ಕುಮಾರ್ ಅವರ ಪೀಠವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಕೇಳಿ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ನೋಟಿಸ್ ಜಾರಿ ಮಾಡಿದೆ. ಲೋಕಾಯುಕ್ತರ ಪರವಾಗಿ ಹಿರಿಯ ವಕೀಲ ಬಸವ ಪ್ರಭು ಪಾಟೀಲ, ಮಾಡಾಳ್ ವಿರೂಪಾಕ್ಷಪ್ಪ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ಮತ್ತು ಸಿದ್ದಾರ್ಥ್ ಲೂತ್ರಾ ವಾದ ಮಂಡಿಸಿದ್ದಾರೆ.