ಬೆಂಗಳೂರು: ಸುಪ್ರೀಂಕೋರ್ಟ್ ನಿರ್ದೇಶನದಂತೆ ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ, ಖಾಸಗಿ ಶಾಲೆಗಳ 5, 8, 9ನೇ ತರಗತಿ, ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಈ ಬಾರಿ ಬೋರ್ಡ್ ಪರೀಕ್ಷೆ ಇರುವುದಿಲ್ಲ. ಈ ಹಿಂದಿನಂತೆ ಶಾಲಾ ಹಂತದಲ್ಲಿ ಪರೀಕ್ಷೆ ನಡೆಸಲಾಗುವುದು. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಬೋರ್ಡ್ ಪರೀಕ್ಷೆ ಬದಲಿಗೆ ಈ ಹಿಂದೆ ಇದ್ದಂತೆ 5. 8. 9ನೇ ತರಗತಿಗೆ ಶಾಲಾ ಹಂತದಲ್ಲಿ ಮೌಲ್ಯಾಂಕನ- 2(ಎಸ್ಎ-2). 11ನೇ ತರಗತಿಗೆ ವಾರ್ಷಿಕ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
5, 8, 9, 11ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಕೆಲವು ಖಾಸಗಿ ಶಾಲಾ ಸಂಘಟನೆಗಳು ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಿವೆ. ಪ್ರಕರಣದ ವಿಚಾರಣೆ ವೇಳೆ ಮಂಡಳಿ ಪರೀಕ್ಷೆ ನಡೆಸದಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಈ ವರ್ಷವೂ ಬೋರ್ಡ್ ಪರೀಕ್ಷೆ ನಡೆಸುವುದಿಲ್ಲ ಎಂದು ತಿಳಿಸಿದ್ದಾರೆ.