alex Certify ಚಂದ್ರಗುತ್ತಿ ದೇವಸ್ಥಾನದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರದ ಕ್ರಮ: ಸಚಿವ ಮಧು ಬಂಗಾರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಂದ್ರಗುತ್ತಿ ದೇವಸ್ಥಾನದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರದ ಕ್ರಮ: ಸಚಿವ ಮಧು ಬಂಗಾರಪ್ಪ

 ಶಿವಮೊಗ್ಗ: ಮಲೆನಾಡಿನ ಜನರ ಪ್ರತಿ ಮನೆಯ ಅಧಿದೇವತೆಯಾಗಿರುವ ಚಂದ್ರಗುತ್ತಿಯ ಪ್ರಸಿದ್ಧ ಶ್ರೀ ರೇಣುಕಾದೇವಿ ಕ್ಷೇತ್ರ ಸರ್ವಾಂಗೀಣ ವಿಕಾಸಕ್ಕೆ ಸರ್ಕಾರದ ವತಿಯಿಂದ ಎಲ್ಲ ರೀತಿಯ ನೆರವನ್ನು ಒದಗಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಅವರು ಇಂದು ಸೊರಬ ಸಮೀಪದ ಚಂದ್ರಗುತ್ತಿಯ ಶ್ರೀ ರೇಣುಕಾದೇವಿಯ ದರ್ಶನ ಪಡೆದ ನಂತರ ಅವರು ಶ್ರೀ ಕ್ಷೇತ್ರದ ಆಡಳಿತಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಅಧಿಕಾರಿಗಳ ಸಭೆಯಲ್ಲಿ ಸುದೀರ್ಘ ಸಮಾಲೋಚನೆ ನಡೆಸಿದರು.

ಶ್ರೀ ಕ್ಷೇತ್ರದಲ್ಲಿನ ಸ್ವಚ್ಛತೆ, ಶೌಚಾಲಯ, ಶುದ್ಧ ಕುಡಿಯುವ ನೀರು, ವಸತಿ ಮತ್ತಿತರ ವಿಷಯಗಳ ಕುರಿತು ಸುಧೀರ್ಘ ಸಮಾಲೋಚನೆ ನಡೆಸಿದ ಅವರು ಯತ್ರಾರ್ಥಿಗಳ ಅನುಕೂಲಕ್ಕಾಗಿ ತುರ್ತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಸ್ತುತ ಸಂದರ್ಭದಲ್ಲಿ ಪಾರಂಪರಿಕ ಮೂಲ ಕಟ್ಟಡ ಶಿಥಿಲಗೊಂಡಿದೆ. ಮಾತ್ರವಲ್ಲದೆ, ಮಳೆಯಿಂದ ಸೋರುತ್ತಿದೆ. ದೇವಸ್ಥಾನದ ಬಾಗಿಲುಗಳು ಸಡಿಲಗೊಂಡಿವೆ. ಅದರ ತುರ್ತು ಕಾರ್ಯವನ್ನು ಕೈಗೊಳ್ಳಲು ಭಾರತೀಯ ಪರಂಪರಿಕ ಕಟ್ಟಡಗಳ ನಿರ್ವಹಣಾ ಸಮಿತಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಲ್ಲದೆ, ಕೈಗೊಳ್ಳಬಹುದಾದ ತುರ್ತು ಕಾಮಗಾರಿಗಳಿಗೆ ಆರ್ಥಿಕ ನೆರವನ್ನು ಸರ್ಕಾರ ಅಥವಾ ಸ್ಥಳೀಯ ಆಡಳಿತ ಅಧಿಕಾರಿಗಳ ಕಚೇರಿಯಿಂದ ಒದಗಿಸಿಕೊಡಲಾಗುವುದು ಎಂದು ತಿಳಿಸಿದ್ದಾರೆ.

ಪ್ರಸ್ತುತ ದೇವಸ್ಥಾನದ ಮೂಲ ಕಟ್ಟಡದ ಪ್ರದೇಶ ಅರಣ್ಯ ಇಲಾಖೆಯ ವ್ಯಾಪ್ತಿಗೊಳಪಟ್ಟಿದೆ. ಅದಕ್ಕಾಗಿ ನಿಯಮಾನುಸಾರ ಇಲಾಖೆಯ ಅನುಮತಿ ಪಡೆದು ಕಟ್ಟಡದ ಜೀರ್ಣೋದ್ದಾರಕ್ಕೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು. ದೇವಸ್ಥಾನದ ಸುತ್ತಮುತ್ತಲ 10 ಎಕರೆ ಪ್ರದೇಶವನ್ನು ಗುರುತಿಸಲಾಗಿದೆ. ಈ ಪ್ರದೇಶದಲ್ಲಿ ಶುದ್ಧ ಕುಡಿಯುವ ನೀರು ನೆರಳು, ವಿದ್ಯುತ್ ಮತ್ತಿತರ ಸೌಲಭ್ಯಗಳನ್ನು ಒದಗಿಸಲು ಸೂಚಿಸಲಾಗಿದೆ. ದೇವಸ್ಥಾನದ ಸುತ್ತಮುತ್ತಲ ಹತ್ತು ಎಕರೆ ಪ್ರದೇಶವನ್ನು ಅರಣ್ಯ ಇಲಾಖೆಯಿಂದ ಪಡೆದುಕೊಂಡ ನಂತರ ಅದಕ್ಕೆ ಪರ್ಯಾಯವಾಗಿ 20 ಎಕರೆ ಭೂಪ್ರದೇಶವನ್ನು ಅರಣ್ಯ ಇಲಾಖೆಗೆ ವಹಿಸಿಕೊಡಲಾಗುವುದು ಎಂದರು.

ಸಭೆಯಲ್ಲಿ ಸಾಗರದ ಒಬ್ಬ ವಿಭಾಗಾಧಿಕಾರಿ ಯತೀಶ್, ತಹಶೀಲ್ದಾರ್ ಮಂಜುಳಾ ಹೆಗಡಾಳ, ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿ ಡಾ. ಪ್ರದೀಪ್ ಕುಮಾರ್, ದೇವಾಲಯದ ಆಡಳಿತಾಧಿಕಾರಿ ಪ್ರಮೀಳಾ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರಿತಾ, ಉಪಾಧ್ಯಕ್ಷೆ ರೇಣುಕಾ ಪ್ರಸಾದ್ ಮೊದಲಾದವರಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...