ಶಿವಮೊಗ್ಗ: ಶಾಲೆಗಳಲ್ಲಿ ಶೌಚಾಲಯ ಸ್ವಚ್ಛಗೊಳಿಸುವಂತಹ ದೌರ್ಭಾಗ್ಯ ವಿದ್ಯಾರ್ಥಿಗಳಿಗೆ ಎಂದಿಗೂ ಬರಬಾರದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಮತ್ತಿಗಾರು ಸರ್ಕಾರಿ ಪ್ರೌಢಶಾಲೆ ನೂತನ ಕೊಠಡಿಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಸರ್ಕಾರ ಶಾಲಾ ಸ್ವಚ್ಛತೆ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದು, ಸಮಸ್ಯೆಗೆ ಶಾಶ್ವತ ಪರಿಹಾರ ರೂಪಿಸಲಾಗುವುದು ಎಂದು ತಿಳಿಸಿದ್ದಾರೆ.
ಶಾಲೆಗಳಲ್ಲಿ ಶೌಚಾಲಯ ಸ್ವಚ್ಛತೆಯ ಕೆಲಸಕ್ಕೆ ನಿಗದಿತ ಸಿಬ್ಬಂದಿ ಇಲ್ಲದ ಕಾರಣ ಇಂತಹ ಸಮಸ್ಯೆ ಎದುರಾಗಿದೆ. ಸಂಬಂಧಿಸಿದ ಗ್ರಾಮ ಪಂಚಾಯಿತಿ, ಶಾಲಾ ಅಭಿವೃದ್ಧಿ ಸಮಿತಿ ಕೂಡ ಸ್ವಚ್ಛತೆ ಸೇರಿದಂತೆ ಶಾಲೆಗಳ ಮೂಲಸೌಕರ್ಯಗಳ ಕಡೆ ಗಮನಹರಿಸಬೇಕು. ಇದಕ್ಕೆ ಯಾರನ್ನು ಹೊಣೆ ಮಾಡುವುದು ಕಷ್ಟದ ಕೆಲಸ ಎಂದು ಹೇಳಿದ್ದಾರೆ.