alex Certify ಶಾಲೆಗಳ ಸ್ವಚ್ಛತೆ ಬಗ್ಗೆ ಸರ್ಕಾರ ಗಂಭೀರ ಚಿಂತನೆ: ಸಮಸ್ಯೆಗೆ ಶಾಶ್ವತ ಪರಿಹಾರ; ಮಧು ಬಂಗಾರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲೆಗಳ ಸ್ವಚ್ಛತೆ ಬಗ್ಗೆ ಸರ್ಕಾರ ಗಂಭೀರ ಚಿಂತನೆ: ಸಮಸ್ಯೆಗೆ ಶಾಶ್ವತ ಪರಿಹಾರ; ಮಧು ಬಂಗಾರಪ್ಪ

ಶಿವಮೊಗ್ಗ: ಶಾಲೆಗಳಲ್ಲಿ ಶೌಚಾಲಯ ಸ್ವಚ್ಛಗೊಳಿಸುವಂತಹ ದೌರ್ಭಾಗ್ಯ ವಿದ್ಯಾರ್ಥಿಗಳಿಗೆ ಎಂದಿಗೂ ಬರಬಾರದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಮತ್ತಿಗಾರು ಸರ್ಕಾರಿ ಪ್ರೌಢಶಾಲೆ ನೂತನ ಕೊಠಡಿಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಸರ್ಕಾರ ಶಾಲಾ ಸ್ವಚ್ಛತೆ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದು, ಸಮಸ್ಯೆಗೆ ಶಾಶ್ವತ ಪರಿಹಾರ ರೂಪಿಸಲಾಗುವುದು ಎಂದು ತಿಳಿಸಿದ್ದಾರೆ.

ಶಾಲೆಗಳಲ್ಲಿ ಶೌಚಾಲಯ ಸ್ವಚ್ಛತೆಯ ಕೆಲಸಕ್ಕೆ ನಿಗದಿತ ಸಿಬ್ಬಂದಿ ಇಲ್ಲದ ಕಾರಣ ಇಂತಹ ಸಮಸ್ಯೆ ಎದುರಾಗಿದೆ. ಸಂಬಂಧಿಸಿದ ಗ್ರಾಮ ಪಂಚಾಯಿತಿ, ಶಾಲಾ ಅಭಿವೃದ್ಧಿ ಸಮಿತಿ ಕೂಡ ಸ್ವಚ್ಛತೆ ಸೇರಿದಂತೆ ಶಾಲೆಗಳ ಮೂಲಸೌಕರ್ಯಗಳ ಕಡೆ ಗಮನಹರಿಸಬೇಕು. ಇದಕ್ಕೆ ಯಾರನ್ನು ಹೊಣೆ ಮಾಡುವುದು ಕಷ್ಟದ ಕೆಲಸ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...