ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಸಚಿವ ಮಧು ಬಂಗಾರಪ್ಪ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ದಂಡ ಪಾವತಿಸದಿದ್ದರೆ ಆರು ತಿಂಗಳು ಜೈಲು ಶಿಕ್ಷೆ ಆದೇಶ ಹಿನ್ನೆಲೆ ತೀರ್ಪು ಪ್ರಶ್ನಿಸಿ ಸಚಿವರು ಸೆಷನ್ಸ್ ನ್ಯಾಯಾಲಯದ ಮೊರೆ ಹೋಗಿದ್ದರು.
ದಂಡದಲ್ಲಿ ಶೇಕಡ 20ರಷ್ಟು ಠೇವಣಿ ಇಡುವ ಷರತ್ತಿನೊಂದಿಗೆ ಜೈಲು ಶಿಕ್ಷೆ ಅಮಾನತುಗೊಳಿಸಲಾಗಿದೆ. 50,000 ಬಾಂಡ್, ಒಬ್ಬರ ಶ್ಯೂರಿಟಿ ಒದಗಿಸಬೇಕು. ತಿಂಗಳೊಳಗೆ ಷರತ್ತು ಪಾಲಿಸದಿದ್ದರೆ ಮಧ್ಯಂತರ ರಿಲೀಫ್ ರದ್ದಾಗಲಿದೆ ಎಂದು 56ನೇ ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ.
ಡಿಸೆಂಬರ್ 29ರ ಆದೇಶದಲ್ಲಿ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ 6.96 ಕೋಟಿ ರೂ. ದಂಡ ಪಾವತಿಸದಿದ್ದರೆ ಆರು ತಿಂಗಳು ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದ್ದು, ಸದ್ಯ ದಂಡದ ಹಣದಲ್ಲಿ ಶೇಕಡ 20ರಷ್ಟು ಠೇವಣಿ ಇಡಬೇಕು. ಷರತ್ತು ಪಾಲಿಸದಿದ್ದರೆ ಮಧ್ಯಂತರ ರಿಲೀಫ್ ರದ್ದಾಗಲಿದೆ ಎಂದು ಸೆಷನ್ಸ್ ನ್ಯಾಯಾಲಯ ತಿಳಿಸಿದೆ.