ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಒಂದರಿಂದ 10ನೇ ತರಗತಿ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಿಸುವ ಯೋಜನೆಗೆ ಆಗಸ್ಟ್ 18ರಂದು ಅಧಿಕೃತವಾಗಿ ಚಾಲನೆ ನೀಡಲಾಗುವುದು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಆ. 18ರಂದು ಅಧಿಕೃತವಾಗಿ ಶಾಲೆಯೊಂದರಲ್ಲಿ ಮೊಟ್ಟೆ/ ಬಾಳೆಹಣ್ಣು/ ಶೇಂಗಾ ಚಿಕ್ಕಿ ವಿತರಿಸುವ ಮೂಲಕ ಯೋಜನೆಗೆ ಚಾಲನೆ ನೀಡಲಾಗುತ್ತದೆ.
ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಒಂದರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ/ ಬಾಳೆಹಣ್ಣು/ ಶೇಂಗಾ ಚಿಕ್ಕಿ ನೀಡಲಾಗುವುದು ಎಂದು ಸಚಿವರು ಹೇಳಿದ್ದಾರೆ.