ಮೈಸೂರು: ಸಮಗ್ರ ಶಿಕ್ಷಣ ಕರ್ನಾಟಕ ಅಭಿಯಾನ(ಸರ್ವ ಶಿಕ್ಷಣ ಅಭಿಯಾನ)ದಲ್ಲೂ ಕೇಂದ್ರ ಸರ್ಕಾರ ಅನುದಾನದ ತಾರತಮ್ಯ ಮಾಡುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ನೀಡಬೇಕಾದ ಹಣವನ್ನು ಕೂಡ ಕೇಂದ್ರ ಸರ್ಕಾರ ಕೊಟ್ಟಿಲ್ಲ ಎಂದು ಆರೋಪಿಸಿದ್ದಾರೆ.
ಸರ್ವ ಶಿಕ್ಷಣ ಅಭಿಯಾನದ ಅಡಿಯಲ್ಲಿ ಪ್ರತಿ ಮಗುವಿಗೆ ಸರಾಸರಿ 5500 ರೂಪಾಯಿ ಅನುದಾನ ನೀಡಬೇಕಿತ್ತು. ರಾಜ್ಯಕ್ಕೆ ಅನುಗುಣವಾಗಿ ಶೇಕಡ 10 ರಿಂದ 15 ರಷ್ಟು ವ್ಯತ್ಯಾಸವಾಗುತ್ತದೆ. ಆದರೆ ನಮ್ಮ ರಾಜ್ಯದ ಪ್ರತಿ ಮಗುವಿಗೆ 2400 ರೂ. ಮಾತ್ರ ನೀಡಲಾಗುತ್ತಿದೆ. ಇದರ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದಿದ್ದರೂ ಇದುವರೆಗೂ ಭೇಟಿಗೆ ಅವಕಾಶ ನೀಡಿಲ್ಲ. ಹೀಗಾಗಿ ನಮ್ಮ ಪಾಲು ಕೇಳಲು ದೆಹಲಿಯಲ್ಲಿ ಪ್ರತಿಭಟನೆ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.