
ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ರಾಜ್ಯದಲ್ಲಿ ಹೊಸದಾಗಿ ಇನ್ನೂ 200 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಶೀಘ್ರವೇ ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಶನಿವಾರ ದಾವಣಗೆರೆ ಜಿಲ್ಲೆ ಚನ್ನಗಿರಿಗೆ ಭೇಟಿ ನೀಡಿದ ವೇಳೆ ಅವರು ಮಾತನಾಡಿ, ಶಾಲೆಗಳಲ್ಲಿ ಮಕ್ಕಳಿಗೆ ನೀತಿ ವಿಜ್ಞಾನ ಕಲಿಕೆ ಅಗತ್ಯವಿದೆ. ಒಂದರಿಂದ 10ನೇ ತರಗತಿಯವರೆಗೆ ನೀತಿ ವಿಜ್ಞಾನ ಕಲಿಸುವ ಯೋಜನೆ ಜಾರಿಗೆ ಚಿಂತನೆ ನಡೆದಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ಅನುಷ್ಠಾನಕ್ಕೆ ತರಲಾಗುವುದು. ವಾರಕ್ಕೆ ಎರಡು ದಿನ ಈ ವಿಷಯ ಕಲಿಸಲಿದ್ದು, ಎರಡು ದಿನ ಶಿಕ್ಷಣ, ಎರಡು ದಿನ ಕಲಿಕೆಯ ವಿಷಯ ತರಗತಿಗಳು ಇರಲಿವೆ ಎಂದು ಹೇಳಿದ್ದಾರೆ.