alex Certify BIG NEWS: ಲೋಕಸಭೆ ಚುನಾವಣೆಗೆ ಶಿವಮೊಗ್ಗದಿಂದ ಅಚ್ಚರಿ ಅಭ್ಯರ್ಥಿ: ಸಚಿವ ಮಧು ಬಂಗಾರಪ್ಪ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಲೋಕಸಭೆ ಚುನಾವಣೆಗೆ ಶಿವಮೊಗ್ಗದಿಂದ ಅಚ್ಚರಿ ಅಭ್ಯರ್ಥಿ: ಸಚಿವ ಮಧು ಬಂಗಾರಪ್ಪ ಮಾಹಿತಿ

ಶಿವಮೊಗ್ಗ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರೆಡಿಯಾಗಿದ್ದು, ಈ ಬಾರಿ ಅಚ್ಚರಿ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಎರಡು ಕ್ಷೇತ್ರಗಳಿಗೆ ಉಸ್ತುವಾರಿ ನೀಡಿದ್ದಾರೆ. ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಕ್ಷೇತ್ರದ ಉಸ್ತುವಾರಿ ಕೊಟ್ಟಿದ್ದಾರೆ. ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಜವಾಬ್ದಾರಿ ವಹಿಸಿದ್ದಾರೆ. ಉಡುಪಿ –ಚಿಕ್ಕಮಗಳೂರು, ದಕ್ಷಿಣ ಕನ್ನಡ, ಶಿವಮೊಗ್ಗ ಕ್ಷೇತ್ರದ ಜವಾಬ್ದಾರಿ ನೀಡಿದ್ದಾರೆ. ಮೂರೂ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತೇನೆ ಎಂದು ಹೇಳಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಟ ಶಿವರಾಜ್ ಕುಮಾರ್ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಹೇಳಿದ್ದರು. ಆದರೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಶಿವಣ್ಣ ಹೇಳಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ರೆಡಿಯಾಗಿದ್ದಾರೆ. ಈ ಬಾರಿ ಅಚ್ಚರಿ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...