
ಮೈಸೂರು: ರೈತರ ಕೃಷಿ ಪಂಪ್ ಸೆಟ್ ಗಳಿಗೆ ಬಿಜೆಪಿ ಸರ್ಕಾರ ವಿದ್ಯುತ್ ಮೀಟರ್ ಅಳವಡಿಸಿದಲ್ಲಿ ಅದನ್ನು ಕಿತ್ತೊಗೆಯಲು ಕಾಂಗ್ರೆಸ್ ಆಂದೋಲನ ಕೈಗೊಳ್ಳಲಿದೆ ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಮಧು ಬಂಗಾರಪ್ಪ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗೆ ನೀಡಲಾಗುತ್ತಿದ್ದ ಸಬ್ಸಿಡಿಗಳನ್ನು ತೆಗೆಯಲಾಗಿದೆ. ರಸಗೊಬ್ಬರ ಮತ್ತು ಕೃಷಿ ಪರಿಕರಗಳ ಬೆಲೆ ಹೆಚ್ಚಾಗಿದೆ. ಬೆಂಬಲ ಬೆಲೆ ಕೂಡ ನೀಡುತ್ತಿಲ್ಲ. ರೈತರನ್ನು ಸಂಕಷ್ಟಕ್ಕೆ ದೂಡಿ ಇಂತಹ ಸಂದರ್ಭದಲ್ಲಿ ಕೃಷಿ ಪಂಪ್ ಸೆಟ್ ಗಳಿಗೆ ಮೀಟರ್ ಅಳವಡಿಸಲು ಸರ್ಕಾರ ಮುಂದಾಗಿದ್ದು, ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಲಿದೆ. ಹೀಗಾಗಿ ರೈತರ ಪಂಪ್ಸೆಟ್ ಗಳಿಗೆ ವಿದ್ಯುತ್ ಮೀಟರ್ ಅಳವಡಿಸಿದರೆ ಅದನ್ನು ಕಿತ್ತೊಗೆಯಲು ಆಂದೋಲನ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.