ಬೆಂಗಳೂರು: ಪ್ರಾಥಮಿಕ ಶಾಲೆ, ಪ್ರೌಢಶಾಲೆಯಿಂದ ಪದವಿ ಕಾಲೇಜುಗಳಿಗೆ ಬಡ್ತಿ ಪಡೆದ ಶಿಕ್ಷಕರು, ಉಪನ್ಯಾಸಕರ ವೇತನ ತಾರತಮ್ಯ ನಿವಾರಣೆ ಮಾಡುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಸದಸ್ಯರಾದ ಮಧು ಮಾದೇಗೌಡ, ಬೋಜೇಗೌಡ, ಮರಿತಿಬ್ಬೇಗೌಡ ಅವರ ಪ್ರಶ್ನೆಗಳಿಗೆ ಸಚಿವರು ಉತ್ತರ ನೀಡಿದ್ದಾರೆ.
ಪ್ರಾಥಮಿಕ ಶಾಲೆ, ಪ್ರೌಢಶಾಲೆಯಿಂದ ಪದವಿ ಕಾಲೇಜುಗಳಿಗೆ ಬಡ್ತಿ ಪಡೆದ ಶಿಕ್ಷಕರು ಮತ್ತು ಉಪನ್ಯಾಸಕರ ವೇತನ ತಾರತಮ್ಯ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು. ಇದಕ್ಕಾಗಿ ನಿಯಮಾವಳಿಗೆ ಅಗತ್ಯ ತಿದ್ದುಪಡಿ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.