alex Certify BIG NEWS: ರಾಜ್ಯದಲ್ಲಿ ಖಾಲಿ ಇರುವ 40 ಸಾವಿರ ಶಿಕ್ಷಕರ ಹುದ್ದೆಗಳಿಗೆ ನೇಮಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ಖಾಲಿ ಇರುವ 40 ಸಾವಿರ ಶಿಕ್ಷಕರ ಹುದ್ದೆಗಳಿಗೆ ನೇಮಕ

ಶಿವಮೊಗ್ಗ: ರಾಜ್ಯದಲ್ಲಿ ಒಟ್ಟು 40,000 ಶಿಕ್ಷಕರ ಹುದ್ದೆ ಖಾಲಿ ಇದ್ದು, ಮುಂದಿನ ವರ್ಷದೊಳಗೆ ಈ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಸಾಗರ ತಾಲೂಕು ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ನವರಾತ್ರಿ ಪ್ರಯುಕ್ತ ಪೂಜೆ ಸಲ್ಲಿಸಿದ ಸಚಿವರು ನಂತರ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು.

ಇನ್ನೊಂದು ವರ್ಷದೊಳಗೆ 20,000 ಶಿಕ್ಷಕರ ನೇಮಕ ಮಾಡಿಕೊಳ್ಳುವ ಚಿಂತನೆ ಇದೆ. ಶಿಕ್ಷಕರಿಗೆ ಇನ್ಫೋಸಿಸ್, ವಿಪ್ರೋ, ದೇಶಪಾಂಡೆ ಫೌಂಡೇಶನ್ ಸೇರಿದಂತೆ ಖಾಸಗಿ ಸಂಸ್ಥೆಗಳ ನುರಿತ ತಜ್ಞರಿಂದ ತರಬೇತಿ ಕೊಡಿಸಲಾಗುತ್ತಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಕರ್ತವ್ಯ. ಈ ನಿಟ್ಟಿನಲ್ಲಿ ಶಾಲೆಗಳ ಅಭಿವೃದ್ಧಿ, ಕೆಪಿಎಸ್ ಶಾಲೆ ಆರಂಭಕ್ಕೆ ಕ್ರಮ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾರ್ಗದರ್ಶನದಲ್ಲಿ ಶಿಕ್ಷಣ ಇಲಾಖೆಯಲ್ಲಿ ಹಲವು ಸುಧಾರಣೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...