ಸೆಹೋರ್: ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ನಡೆದ ಭೀಕರ ಘಟನೆಯಲ್ಲಿ ಯುವತಿಯೊಬ್ಬಳ ಗಂಟಲು ಕೊಯ್ದು ಹತ್ಯೆ ಮಾಡಲಾಗಿದೆ. ಚಲಿಸುತ್ತಿದ್ದ ರೈಲಿನಲ್ಲಿ ಆರೋಪಿ ಯುವತಿಗೆ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ್ದು, ಇದನ್ನು ವಿರೋಧಿಸಿದಾಗ ಗಂಟಲು ಇರಿದು ಹತ್ಯೆ ಮಾಡಿದ್ದಾನೆ.
ಇಂದೋರ್ ಮತ್ತು ಬಿಲಾಸ್ಪುರ್ ನಡುವೆ ಚಲಿಸುತ್ತಿದ್ದ ರೈಲಿನಲ್ಲಿ ಘಟನೆ ನಡೆದಿದೆ. ರೈಲು ಸೆಹೋರ್ ನಿಲ್ದಾಣವನ್ನು ತಲುಪುವ ಮೊದಲೇ 21 ವರ್ಷದ ಯುವತಿ ಮೃತಪಟ್ಟಿದ್ದಾಳೆ. ಬಾಲಕಿ ಕೊಲೆ ಮಾಡಿದ ನಂತರ ಆರೋಪಿ ರೈಲಿನಿಂದ ಪರಾರಿಯಾಗಿದ್ದಾನೆ.
ಭೋಪಾಲ್ ನಿವಾಸಿಯಾಗಿರುವ ಯುವತಿ ಇಂದೋರ್ ಗೆ ಪ್ರಯಾಣ ಬೆಳೆಸುತ್ತಿದ್ದಳು. ಆಕೆಯ ತಂದೆ ಜೈಲಿನಲ್ಲಿದ್ದು, ಜಾಮೀನಿನ ಮೇಲೆ ಬಿಡುಗಡೆ ಮಾಡಿಸಲು ಪ್ರಯತ್ನ ನಡೆಸಿದ್ದಳು. ಮಾಹಿತಿಯ ಪ್ರಕಾರ, ಆರೋಪಿ ಆಕೆಗೆ ಕಿರುಕುಳ ನೀಡಲು ಆರಂಭಿಸಿದ. ಆಕೆ ವಿರೋಧಿಸಿದಾಗ ಹರಿತವಾದ ವಸ್ತುವಿನಿಂದ ಗಂಟಲು ಕತ್ತರಿಸಿ ಕೊಲೆ ಮಾಡಿದ್ದಾನೆ. ಪೊಲೀಸರು ಪರಿಶೀಲನೆ ನಡೆಸಿದ್ದು, ಇದುವರೆಗೂ ಯಾರನ್ನೂ ಬಂಧಿಸಿಲ್ಲ. ತನಿಖೆ ಮುಂದುವರೆಸಲಾಗಿದೆ.