alex Certify ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಆಳಕ್ಕೆ ಬಸ್ ಬಿದ್ದು 5 ಸಾವು, 40 ಜನರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಆಳಕ್ಕೆ ಬಸ್ ಬಿದ್ದು 5 ಸಾವು, 40 ಜನರಿಗೆ ಗಾಯ

ಇಂದೋರ್: ಮಧ್ಯಪ್ರದೇಶದ ಇಂದೋರ್‌ ನ ಸಿಮ್ರೋಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಸ್ 50 ಅಡಿ ಆಳದ ಕಮರಿಗೆ ಬಿದ್ದ ಪರಿಣಾಮ ಕನಿಷ್ಠ ಐವರು ಸಾವನ್ನಪ್ಪಿದ್ದು, 40 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಗಾಯಾಳುಗಳಲ್ಲಿ 10 ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ. ಅಪಘಾತ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಗಾಯಗೊಂಡ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಇಂದೋರ್‌ ನಿಂದ ಖಾಂಡ್ವಾಗೆ ಹೋಗುತ್ತಿತ್ತು. ಸಿಮ್ರೋಲ್ ಪೊಲೀಸ್ ಠಾಣೆ ವ್ಯಾಪ್ತಿಯ ಭೈರವ್ ಘಾಟ್ ನಲ್ಲಿ ಈ ದುರ್ಘಟನೆ ನಡೆದಿದೆ. 50-60 ಪ್ರಯಾಣಿಕರಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 50 ಅಡಿ ಆಳದ ಕಂದಕಕ್ಕೆ ಬಿದ್ದಿದೆ.

ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು 108 ಆಂಬ್ಯುಲೆನ್ಸ್‌ ನೊಂದಿಗೆ ಸ್ಥಳಕ್ಕೆ ಧಾವಿಸಿದ್ದಾರೆ. ಸ್ಥಳೀಯರ ನೆರವಿನೊಂದಿಗೆ ಗಾಯಾಳುಗಳನ್ನು ರಕ್ಷಿಸಿ ಸಮೀಪದ ಆಸ್ಪತ್ರೆಗೆ ಕಳುಹಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...