ಭೋಪಾಲ್: ಮಧ್ಯಪ್ರದೇಶದ ಭೋಪಾಲ್ ನ ಕಮಲಾ ನೆಹರು ಆಸ್ಪತ್ರೆಯ ಐಸಿಯು ವಾರ್ಡ್ ನಲ್ಲಿ ಅಗ್ನಿ ಅವಘಡದಲ್ಲಿ ಮೃತಪಟ್ಟ ಮಕ್ಕಳ ಸಂಖ್ಯೆ 4 ಕ್ಕೆ ಏರಿಕೆಯಾಗಿದೆ.
ಆಸ್ಪತ್ರೆಯ ಮಕ್ಕಳ ವಾರ್ಡ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಾರ್ಡ್ ನಲ್ಲಿ ಇದ್ದ 40 ಮಕ್ಕಳ ಪೈಕಿ 36 ಮಕ್ಕಳು ಸುರಕ್ಷಿತರಾಗಿದ್ದಾರೆ. ಮೃತ ಮಕ್ಕಳ ಕುಟುಂಬಗಳಿಗೆ ತಲಾ 4 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್ ತಿಳಿಸಿದ್ದಾರೆ.
ಮಧ್ಯಪ್ರದೇಶದ ಭೋಪಾಲ್ ಆಸ್ಪತ್ರೆಯಲ್ಲಿ ನಲ್ಲಿ ಅಗ್ನಿ ದುರಂತ ಸಂಭವಿಸಿ ನಾಲ್ವರು ಮಕ್ಕಳು ಮೃತಪಟ್ಟಿದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು ಘಟನೆಯ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ.