ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಿಂದ ಸೋತಿದ್ದಕ್ಕೆ ಖಿನ್ನತೆಗೊಳಗಾದ ಕಾಂಗ್ರೆಸ್ ನಾಯಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಧ್ಯ ಪ್ರದೇಶದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ರೇವಾದ ಹನುಮಾನ ಪ್ರದೇಶದ ವಾರ್ಡ್ 9ರಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಮುಖಂಡ ಹರಿನಾರಾಯಣ ಗುಪ್ತ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದವರಾಗಿದ್ದಾರೆ.
ಇವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಅಖಿಲೇಶ್ ಗುಪ್ತಾ ವಿರುದ್ಧ ಕೇವಲ 14 ಮತಗಳ ಅಂತರದಿಂದ ಪರಾ ಭವಗೊಂಡಿದ್ದರು. ಇದರಿಂದ ಖಿನ್ನತೆಗೊಳಗಾದ ಅವರಿಗೆ ಎದೆ ನೋವು ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.