alex Certify BREAKING NEWS: ಬಿಜೆಪಿ ಏಕಾಂಗಿಯಾಗಿ 370, NDAಗೆ 400 ಕ್ಕೂ ಅಧಿಕ ಸ್ಥಾನ: ಪ್ರಧಾನಿ ಮೋದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬಿಜೆಪಿ ಏಕಾಂಗಿಯಾಗಿ 370, NDAಗೆ 400 ಕ್ಕೂ ಅಧಿಕ ಸ್ಥಾನ: ಪ್ರಧಾನಿ ಮೋದಿ

ಭೋಪಾಲ್: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ 370 ಸ್ಥಾನಗಳನ್ನು ದಾಟಲಿದೆ. ಎನ್‌ಡಿಎ 400 ಸ್ಥಾನ ದಾಟಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಮಧ್ಯಪ್ರದೇಶದ ಝಬುವಾದಲ್ಲಿ ಸಾರ್ವಜನಿಕ ಭಾಷಣದ ವೇಳೆ ಮಾತನಾಡಿದ ಅವರು, ಜನರಿಗಾಗಿ ನಾನು ಹಗಲು ರಾತ್ರಿ ಕೆಲಸ ಮಾಡುತ್ತೇನೆ. ಮಧ್ಯಪ್ರದೇಶದ ಜನ ಈ ಬಾರಿ ಬೆಂಬಲ ನೀಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡಿದೆ. ಲೋಕಸಭೆ ಚುನಾವಣೆಯಲ್ಲಿ ಸಂಪೂರ್ಣವಾಗಿ ಸೋಲಲಿದೆ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿ 370 ಸ್ಥಾನಗಳನ್ನು ದಾಟಲಿದೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಯ ಪ್ರಾಬಲ್ಯವನ್ನು ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ, ಪಕ್ಷವು 370 ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸಲು ಸಜ್ಜಾಗಿದೆ. ಎನ್‌ಡಿಎ 400 ಸ್ಥಾನ ದಾಟಲಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...