alex Certify ತಡರಾತ್ರಿ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದವನಿಗೆ ಬಿಗ್ ಶಾಕ್: ಮರ್ಮಾಂಗ ಕತ್ತರಿಸಿದ ಮಹಿಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಡರಾತ್ರಿ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದವನಿಗೆ ಬಿಗ್ ಶಾಕ್: ಮರ್ಮಾಂಗ ಕತ್ತರಿಸಿದ ಮಹಿಳೆ

ಭೋಪಾಲ್: ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯ ಮರ್ಮಾಂಗವನ್ನು ಮಹಿಳೆ ಕತ್ತರಿಸಿ ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿದ ಘಟನೆ ನಡೆದಿದೆ.

ಸಿಧಿ ಜಿಲ್ಲಾ ಕೇಂದ್ರದಿಂದ 50 ಕಿಲೋಮೀಟರ್ ದೂರದಲ್ಲಿರುವ ಉಮರಿಯಾ ಗ್ರಾಮದಲ್ಲಿ ಘಟನೆ ನಡೆದಿದೆ. 45 ವರ್ಷ ವಯಸ್ಸಿನ ಮಹಿಳೆ 13 ವರ್ಷದ ಮಗನೊಂದಿಗೆ ವಾಸವಾಗಿದ್ದು ಗುರುವಾರ ರಾತ್ರಿ ಅವರ ಮನೆಗೆ ವ್ಯಕ್ತಿಯೊಬ್ಬ ನುಗ್ಗಿದ್ದು ಆತ ಕಳ್ಳನಿರಬಹುದೆಂದು ಭಯಗೊಂಡ ಮಗ ಮನೆಯಿಂದ ಹೊರಗೆ ಓಡಿಹೋಗಿದ್ದಾನೆ.

ಈ ವೇಳೆ ವ್ಯಕ್ತಿ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು ಆಕೆ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ರಕ್ಷಣೆಗಾಗಿ ಕುಡುಗೋಲಿನಿಂದ ವ್ಯಕ್ತಿಯ ಮರ್ಮಾಂಗವನ್ನು ಕತ್ತರಿಸಿದ್ದಾಳೆ. ರಾತ್ರಿ 1.30ರ ವೇಳೆಯಲ್ಲೇ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದಾಳೆ.

ಖಡ್ಡಿ ಪೊಲೀಸ್ ಠಾಣೆ ಉಸ್ತುವಾರಿ ಧರ್ಮೇಂದ್ರ ಸಿಂಗ್ ರಜಪೂತ್ ಈ ಬಗ್ಗೆ ಮಾಹಿತಿ ನೀಡಿದ್ದು, ಗಾಯಾಳುವನ್ನು ಸಿಧಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ರೇವಾದ ಸಂಜಯ್ ಗಾಂಧಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...