ಭೋಪಾಲ್: ಮಧ್ಯಪ್ರದೇಶ ರಾಜಧಾನಿ ಭೋಪಾಲ್ ನಲ್ಲಿ ರಾಜ್ಯ ಸಚಿವಾಲಯದ ಕಟ್ಟದದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ.
ಭೋಪಾಲ್ ನಲ್ಲಿರುವ ವಲ್ಲಭ ಭವನ ಸಚಿವಾಲಯದ ಕಟ್ಟಡದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಅವಘಡ ಸಂಭವಿಸಿದ್ದು, ಕಟ್ಟಡದಲ್ಲಿ ಐವರು ಸಿಲುಕಿಕೊಂಡಿದ್ದು, ಅವರನ್ನು ಹೊರ ತೆಗೆಯಲು ರಕ್ಷಣಾ ಕಾರಾಚರಣೆ ತೀವ್ರಗೊಂಡಿದೆ.
ಘಟನಾ ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಕಟ್ಟಡದ ತುಂಬೆಲ್ಲ ದಟ್ಟ ಹೊಗೆ ಆವರಿಸಿದೆ. ಇತ್ತೀಚಿನ ಮಾಹಿತಿ ಪ್ರಕಾರ ಅದೃಷ್ಟವಶಾ ಯಾವುದೇ ಸಾವು-ನೋವು ಸಂಭವಿಸಿಲ್ಲ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ.