
ಮಡಿಕೇರಿ: ಸರ್ಕಾರಿ ಬಸ್ ಪಲ್ಟಿಯಾಗಿ ವಿದ್ಯಾರ್ಥಿಗಳು ಸೇರಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ದೇವಸ್ತೂರು ಸಮೀಪ ಅಪಘಾತ ಸಂಭವಿಸಿದೆ.
ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಹಳ್ಳಕ್ಕೆ ಉರುಳಿ ಬಿದ್ದಿದೆ. ಮಡಿಕೇರಿಗಿಂತ ಕಾಲೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಪಲ್ಟಿಯಾಗಿದೆ. ಕೂಡಲೇ ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.