
ಮಡಿಕೇರಿ: ಕೊಡಗಿನಲ್ಲಿ ನಾಲ್ವರನ್ನು ಭೀಕರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಗಿರೀಶ್(38) ನನ್ನು ಕೇರಳದಲ್ಲಿ ಬಂಧಿಸಲಾಗಿದೆ.
ಆರು ವರ್ಷದ ಪುತ್ರಿ ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಕತ್ತಿಯಿಂದ ಕಡಿದು ಭೀಕರವಾಗಿ ಹತ್ಯೆ ಮಾಡಿ ಕೇರಳದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಗಿರೀಶ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಮಾವ ಕರಿಯ(75), ಅತ್ತೆ ಗೌರಿ(70), ಪತ್ನಿ ನಾಗಿ(30) ಹಾಗೂ ಪುತ್ರಿ ಕಾವೇರಿ(6) ಅವರನ್ನು ಕೊಲೆ ಮಾಡಿದ ಬಳಿಕ ಆರೋಪಿ ಕೇರಳದಲ್ಲಿ ತಲೆಮರೆಸಿಕೊಂಡಿದ್ದ. ನಾಗಿಯೊಂದಿಗೆ ಗಿರೀಶ್ ಮೂರನೇ ಮದುವೆಯಾಗಿ ತೋಟದ ಮನೆಯಲ್ಲಿ ಜೀವನ ನಡೆಸುತ್ತಿದ್ದರು. ಕಾಫಿ ಬೀಜ ಮಾರಾಟ ಮಾಡಿದ ವಿಚಾರಕ್ಕೆ ಗಲಾಟೆ ನಡೆದು ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.