ಮಡಿಕೇರಿ: ಆಕಸ್ಮಿಕವಾಗಿ ಬಂದೂಕಿನಿಂದ ಗುಂಡು ಹಾರಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ನಡೆದಿದೆ.
ಪೊನ್ನಚೆಟ್ಟಿರ ಮಿತ್ರ ಚಂಗಪ್ಪ (49) ಮೃತ ದುರ್ದೈವಿ. ಒಂಟಿ ನಳಿಗೆ ಬಂದೂಕಿನಿಂದ ಗುಂಡು ಹಾರಿ ಈ ದುರಂತ ಸಂಭವಿಸಿದೆ.
ಬಂದೂಕು ಕೆಳಗೆ ಬಿದ್ದ ಪರಿಣಾಮ ಗುಂಡು ಹಾರಿರಬಹುದು ಅದು ವ್ಯಕ್ತಿಗೆ ತಗುಲಿ ಸಾವನ್ನಪ್ಪಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಮೃತ ಚಂಗಪ್ಪ ಚೇರಂಬಾಣೆ ಪಟ್ಟಣದಲ್ಲಿ ವೈನ್ ಶಾಪ್ ನಡೆಸುತ್ತಿದ್ದರು. ವೈನ್ ಶಾಪ್ ಎದುರಲ್ಲೇ ಈ ಘಟನೆ ನಡೆದಿದೆ. ಮಡಿಕೇರಿ ಗ್ರಾಮಾಂತ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.