
ಮಡಿಕೇರಿ: ಅನ್ಯಕೋಮಿನ ಬಗ್ಗೆ ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಮಡಿಕೇರಿಯಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಮಡಿಕೇರಿ ನಗರಸಭೆ ಸದಸ್ಯ ಮುಸ್ತಾಫ ಮತ್ತು ಅಬ್ದುಲ್ ಬಂಧಿತರು ಎಂದು ಹೇಳಲಾಗಿದೆ. ಇವರು ಅನ್ಯಕೋಮಿನ ಬಗ್ಗೆ ಪ್ರಚೋದನಾಕಾರಿ ಭಾಷಣ ಮಾಡಿದ್ದ ಆಡಿಯೋ ವೈರಲ್ ಆಗಿತ್ತು. ಹಿಂದೂ ಸಂಘಟನೆ ಕಾರ್ಯಕರ್ತ ಶೇಷಪ್ಪ ದೂರು ನೀಡಿದ್ದರು. ಪರಿಶೀಲನೆ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.