alex Certify Madras Eye : `ಮದ್ರಾಸ್ ಐ’ ವೈರಾಣುವಿನ ಲಕ್ಷಣ ಕಂಡುಬಂದ್ರೆ ಈ ಮುಂಜಾಗೃತಾ ಕ್ರಮ ಕೈಗೊಳ್ಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Madras Eye : `ಮದ್ರಾಸ್ ಐ’ ವೈರಾಣುವಿನ ಲಕ್ಷಣ ಕಂಡುಬಂದ್ರೆ ಈ ಮುಂಜಾಗೃತಾ ಕ್ರಮ ಕೈಗೊಳ್ಳಿ

ದಾವಣಗೆರೆ : ಸಾಮಾನ್ಯವಾಗಿ ಚಳಿಗಾಲದಲ್ಲಿ ಕಾಣಿಸಿಕೊಳ್ಳುತ್ತಿದ್ದ ಮದ್ರಾಸ್ ಐ ವೈರಾಣು ಅತೀ ವೇಗವಾಗಿ ಹರಡುತ್ತಿದ್ದು ಇದಕ್ಕೆ  ಭಯ ಪಡಬೇಕಾಗಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗರಾಜ ತಿಳಿಸಿದ್ದಾರೆ.

ಮದ್ರಾಸ್ ಐ ಈ ಬಾರಿ ಮಳೆಗಾಲದಲ್ಲಿ ಆರಂಭವಾಗಿದ್ದು ರಾಜ್ಯದ ಜನರಕಣ್ಣು ಕೆಂಪಾಗಿಸುತ್ತಿದೆ, ಮುಖ್ಯವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಹಾಸ್ಟಲ್ ವಿದ್ಯಾರ್ಥಿಗಳಲ್ಲಿ “ಮದ್ರಾಸ್ ಐ” ವೇಗಾಗಿ ಹರಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ, ಕಂಜಕ್ವಿಟಿಸ್ ಎಂದು ಕರೆಯಲಾಗುವ ಮದ್ರಾಸ್ ಐ ಅಥವಾ ಕಣ್ಣು ವೈರಾಣುಗಳಿಂದ ಹರಡುವ ಕಣ್ಣಿನ ಸಮಸ್ಯೆ ತೇವಾಂಶ ಹೆಚ್ಚಾದಾಗ ಅಥವಾ ಚಳಿಗಾಲದ ವಾತಾವರಣದಲ್ಲಿ ಹುಟ್ಟಿಕೊಳ್ಳುವ ಈ ವೈರಾಣುಗಳು ನೇರವಾಗಿಕಣ್ಣಿ ಮೇಲೆ ಪರಿಣಾಮಉಂಟು ಮಾಡುತ್ತವೆ, ರಾಜ್ಯದಲ್ಲಿ ಮಳೆಯಾಗುತ್ತಿದ್ದ ಪರಿಣಾಮ ಬಿಸಿಲು ಇಲ್ಲದಂತಾಗಿದೆ ಇದರ ಪರಿಣಾಮತೇವಾಂಶ ಹೆಚ್ಚಾಗಿ ಅವಧಿಗೂ ಮೊದಲೇ ಈ ವೈರಾಣು ದಾಂಗುಡಿ ಇರಿಸಿದೆ.

ರೋಗದ ಲಕ್ಷಣಗಳು: ಕಸ ಬಿದ್ದದಂತೆಆಗುವ ರೀತಿಯಾಗಿಕಣ್ಣುಚುಚ್ಚುವುದು, ಬೆಳಗ್ಗೆ ಎದ್ದಾಗ ಹೆಚ್ಚು ಪಿಸುರು (ಪಿಚ್ಚು) ಬರುತ್ತದೆ, ಕಣ್ಣುಗಳು ಕೆಂಪಾಗಿ, ಕಿರಿಕಿರಿ ಹೆಚ್ಚುವುದು, ಕಣ್ಣಲ್ಲಿ ನೀರು ಬರುವುದು, ರೆಪ್ಪೆ ಕಣ್ಣು ದಪ್ಪ ಆಗುವುದು ಕಂಡು ಬರುತ್ತದೆ.

ಮುಂಜಾಗೃತಾ ಕ್ರಮಗಳು: ಸಮಸ್ಯೆ ಇರುವವರು ಕೆಲದಿನ ಪ್ರತ್ಯೇಕ ವಾಸ ಮಾಡಿ, ಲಕ್ಷಣಗಳು ಕಾಣಿಸಿಕೊಳ್ಳದಿದ್ದರೆ, ಕಣ್ಣಿಗೆಔಷಧ ಹಾಕಿಸಿಕೊಳ್ಳಬೇಡಿ, ದಿನಕ್ಕೆ 8-10 ಬಾರಿ ಸ್ಯಾನಿಟೈಸರ್, ಸೋಪು ಬಳಸಿ ಕೈ ತೊಳೆದುಕೊಳ್ಳಿ, ವೈರಸ್ ಕಾಣಿಸಿಕೊಂಡಾಗ ಹತ್ತಿರದ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಸಲಹೆ ಪಡೆಯಬೇಕು, ವೈದ್ಯರ ತಪಾಸಣೆ ಮಾಡಿಸದೇ, ಔಷಧಿ ಅಂಗಡಿಗಳಲ್ಲಿ ಸಿಗುವ ಡ್ರಾಪ್ಸ್‍ಗಳನ್ನು ಬಳಸಬಾರದು, ಕಣ್ಣು ಮುಟ್ಟಿಕೊಳ್ಳುವುದನ್ನು ಕಡಿಮೆ ಮಾಡಬೇಕು.

ಪರಿಹಾರ: ಸಮಸ್ಯೆ ಉಳ್ಳವರು ಇತರರಿಂದದೂರಇರಬೇಕು, ವೈದ್ಯರ ಬಳಿ ತೋರಿಸಿ, ಐ ಡ್ರಾಪ್ಸ್ ಮಾತ್ರ ಹಾಕಬೇಕು, ಸಮಸ್ಯೆ ಕಡಿಮೆ ಆಗುವವರೆಗೆ ಗಾಳಿಗೆ ಹೋಗಬಾರದು, ದ್ವಿಚಕ್ರ ವಾಹನ ಓಡಿಸಬಾರದು, ಟಿ.ವಿ,ಮೊಬೈಲ್, ಕಂಪ್ಯೂಟರ್‍ಗಳನ್ನು ನೋಡುವುದನ್ನ ಕಡಿಮೆ ಮಾಡಿ ಕಣ್ಣಿಗೆ ವಿಶ್ರಾಂತಿಕೊಡಬೇಕು.

ರೋಗದ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣವೇ ಸಮೀಪದ ನಗರ, ಗ್ರಾಮೀಣ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯಆರೋಗ್ಯ ಕೇಂದ್ರಗಳು, ತಾಲ್ಲೂಕು ಆಸ್ಪತ್ರೆಗಳು ಹಾಗೂ ಜಿಲ್ಲಾಆಸ್ಪತ್ರೆಗೆ ಭೇಟಿ, ವೈದ್ಯರ ಹತ್ತಿರತಪಾಸಣೆ ಮಾಡಿಸಿ ಚಿಕಿತ್ಸೆ ಪಡೆಯುವುದು ಸೂಕ್ತ. ವೈರಾಣುವಿನ ಸಮಸ್ಯೆ ಆಗಿರುವ ಕಾರಣ ನಿರ್ದಿಷ್ಟ ಚಿಕಿತ್ಸೆ ಇಲ್ಲ ಮುನ್ನೆಚ್ಚರಿಕೆಯೇ ಮದ್ದಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...