alex Certify BIG NEWS: ಸರಿಯಾಗಿ ಕೆಲಸ ಮಾಡದೇ ಖಾಸಗಿ ವ್ಯವಹಾರ, ಟ್ಯೂಷನ್ ನಡೆಸುವ ಶಿಕ್ಷಕರ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸರಿಯಾಗಿ ಕೆಲಸ ಮಾಡದೇ ಖಾಸಗಿ ವ್ಯವಹಾರ, ಟ್ಯೂಷನ್ ನಡೆಸುವ ಶಿಕ್ಷಕರ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಆದೇಶ

ಮದುರೈ: ಖಾಸಗಿ ವ್ಯವಹಾರಗಳಲ್ಲಿ ತೊಡಗಿರುವ ಅಥವಾ ಟ್ಯೂಷನ್ ನಡೆಸುವ ಸರ್ಕಾರಿ ಶಿಕ್ಷಕರನ್ನು ಮದ್ರಾಸ್ ಹೈಕೋರ್ಟ್‌ ಮಧುರೈ ಪೀಠ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

ತಂಜಾವೂರು ಜಿಲ್ಲೆಯ ಪಂಚಾಯತ್ ಯೂನಿಯನ್ ಮಿಡ್ಲ್ ಸ್ಕೂಲ್‌ ನ ಮಾಧ್ಯಮಿಕ ದರ್ಜೆಯ ಶಿಕ್ಷಕಿಯೊಬ್ಬರು ತನ್ನ ಪತಿ ಕೆಲಸ ಮಾಡುತ್ತಿರುವ ಶಾಲೆಯ 30 ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಶಾಲೆಗೆ ತನ್ನನ್ನು ವರ್ಗಾವಣೆ ಮಾಡುವಂತೆ ಪರಿಗಣಿಸಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ ಮನವಿಯನ್ನು ಹೈಕೋರ್ಟ್ ವಿಚಾರಣೆ ನಡೆಸುತ್ತಿದೆ. 2021 ರಲ್ಲಿ ಶಾಲಾ ಶಿಕ್ಷಣ ಇಲಾಖೆಯು ಪತಿ-ಪತ್ನಿಯ ವರ್ಗಾವಣೆ ಅಡಿಯಲ್ಲಿ ಅಂಗೀಕರಿಸಿದ ಸರ್ಕಾರಿ ಆದೇಶದ ಅಡಿಯಲ್ಲಿ ಇದನ್ನು ಕೋರಲಾಗಿದೆ.

ಈ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿ ಎಸ್‌.ಎಂ. ಸುಬ್ರಮಣ್ಯಂ ಅವರು, ಖಾಸಗಿ ಬೋಧನೆ, ಖಾಸಗಿ ಅಥವಾ ಅರೆಕಾಲಿಕ ವ್ಯವಹಾರಗಳಲ್ಲಿ ತೊಡಗಿರುವ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಗೆ ಆದೇಶಿಸಿದ್ದಾರೆ.

ಅವ್ಯವಹಾರದಲ್ಲಿ ತೊಡಗಿರುವ ಶಿಕ್ಷಕರ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಜಿಲ್ಲಾ ಮಟ್ಟದ ತಂಡಗಳನ್ನು ರಚಿಸುವಂತೆ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನ್ಯಾಯಾಲಯ ಆದೇಶಿಸಿದೆ.

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಅಧಃಪತನವಾಗುತ್ತಿರುವುದನ್ನು ಗಮನಿಸಿದ ನ್ಯಾಯಾಲಯ, ಸರ್ಕಾರಿ ಶಾಲೆಗಳು ರಾಜ್ಯದಲ್ಲಿ ಖಾಸಗಿ ಶಾಲೆಗಳಿಗೆ ಸರಿಸಾಟಿಯಾಗಿಲ್ಲ ಎಂದು ಹೇಳಿದೆ. ಹಲವು ದೇಶಗಳಲ್ಲಿ ಸರ್ಕಾರಿ ಶಾಲೆಗಳನ್ನು ಅತ್ಯುತ್ತಮ ಶಿಕ್ಷಣ ಸಂಸ್ಥೆಗಳೆಂದು ಪರಿಗಣಿಸಲಾಗಿದೆ. ಆದರೆ, ರಾಜ್ಯದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅಪಾರ ಹಣ ಖರ್ಚು ಮಾಡಿದರೂ ಖಾಸಗಿ ಸಂಸ್ಥೆಗಳಿಗೆ ಸರಿಸಾಟಿಯಾಗಿ ಸ್ಪರ್ಧಾತ್ಮಕ ವಾತಾವರಣ ನಿರ್ಮಾಣವಾಗಿಲ್ಲ. ಬದಲಾಗಬೇಕು ಎಂದು ಹೇಳಲಾಗಿದೆ.

ಪೋಷಕರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ದೂರುಗಳನ್ನು ದಾಖಲಿಸಲು ಮತ್ತು ಶಿಕ್ಷಕರ ದುರ್ವರ್ತನೆ ಮತ್ತು ಅಕ್ರಮಗಳನ್ನು ಗುರುತಿಸಲು ದೂರವಾಣಿ ಸಂಖ್ಯೆಗಳನ್ನು ಸ್ಥಾಪಿಸಲು ಶಿಕ್ಷಣ ಇಲಾಖೆಗೆ ನ್ಯಾಯಾಲಯ ಸೂಚಿಸಿದೆ.

ನೋಂದಾಯಿತ ಶಿಕ್ಷಕರ ಸಂಘಗಳ ಚಟುವಟಿಕೆಗಳ ಬಗ್ಗೆ ಮಾಹಿತಿ, ದೂರು ಸಾಮಗ್ರಿಗಳನ್ನು ಸಂಗ್ರಹಿಸಲು ಮತ್ತು ನಿಯಮಗಳ ಪ್ರಕಾರ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆಯೇ ಎಂದು ಪರಿಶೀಲಿಸಲು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ತಿಳಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...