
ಬೆಂಗಳೂರು: ಮದರಸಾದಲ್ಲಿ ಬಾಲಕಿಯರ ಮೇಲೆ ಕ್ರೌರ್ಯ ನಡೆಸಿದ ಪ್ರಕರಣ ಸಂಬಂಧ ಆರೋಪಿಯನ್ನು ಬೆಂಗಳೂರಿನ ಕೊತ್ತನೂರು ಪೊಲೀಸರು ಬಂಧಿಸಿದ್ದಾರೆ.
ಮೊಹಮ್ಮದ್ ಹಸನ್ ಬಂಧಿತ ಆರೋಪಿ. ಮೊಹಮ್ಮದ್ ಹಸನ್, ಬಾಲಕಿಯರನ್ನು ಮದರಸಾದ ಕಚೇರಿಗೆ ಕರೆದು ಅವರಿಗೆ ಕಪಾಳ ಮೋಕ್ಷ ಮಾಡಿ, ಕಾಲಿನಿಂದ ಒದ್ದು, ಬೆನ್ನಿಗೆ ಮನಬಂದಂತೆ ಹೊಡೆದು ಅಟ್ಟಹಾಸ ಮೆರೆಯುತ್ತಿದ್ದ. ಬಾಲಕಿಯರ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿತ್ತು.
ವಿಷಯ ತಿಳಿಯುತ್ತಿದ್ದಂತೆ ರೊಚ್ಚಿಗೆದ್ದ ಪೋಷಕರು ಮದರಸಾಗೆ ದೌಡಾಯಿಸಿದ್ದಾರೆ. ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಅಲ್ಲದೇ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪೋಷಕರು ದೂರು ನೀಡಿದ್ದರು.
ಘಟನೆ ಬೆನ್ನಲ್ಲೇ ಪೊಲೀಸರು ಆರೋಪಿ ಮೊಹಮ್ಮದ್ ಹಸನ್ ನನ್ನು ಬಂಧಿಸಿ, ತನಿಖೆ ನಡೆಸಿದ್ದಾರೆ.