alex Certify ಮದುವೆ ನೆಪದಲ್ಲಿ ಶಿಕ್ಷಕನಿಂದ ಪದೇ ಪದೇ ಅತ್ಯಾಚಾರ, ಗರ್ಭಪಾತಕ್ಕೆ ಬಲವಂತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆ ನೆಪದಲ್ಲಿ ಶಿಕ್ಷಕನಿಂದ ಪದೇ ಪದೇ ಅತ್ಯಾಚಾರ, ಗರ್ಭಪಾತಕ್ಕೆ ಬಲವಂತ

ಶೀಶ್ ಘರ್: ಉತ್ತರ ಪ್ರದೇಶದ ಶೀಶ್ ಘರ್ ಪ್ರದೇಶದಲ್ಲಿ ಮದ್ರಸಾ ಶಿಕ್ಷಕನ ಮೇಲೆ ಅತ್ಯಾಚಾರ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಸಂತ್ರಸ್ತೆ ನೀಡಿದ ದೂರಿನ ಪ್ರಕಾರ, ಆಕೆ ನಾಲ್ಕು ವರ್ಷಗಳ ಹಿಂದೆ ಮದ್ರಾಸಕ್ಕೆ ಬಂದಿದ್ದಳು. ಆರೋಪಿಯು ಆಕೆಯೊಂದಿಗೆ ಅಧ್ಯಯನ ಮಾಡುತ್ತಿದ್ದ. ನಂತರ ಆತ ಮದ್ರಸಾದಲ್ಲಿ ಕಲಿಸಲು ಆರಂಭಿಸಿದ್ದನು. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎಂದು ಮಹಿಳೆ ತಿಳಿಸಿದ್ದಾಳೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರೋಹಿತ್ ಸಿಂಗ್ ಸಜ್ವಾನ್ ಹೇಳಿದ್ದಾರೆ.

ಮದುವೆಯ ನೆಪದಲ್ಲಿ ಆರೋಪಿಯಿಂದ ಪದೇ ಪದೇ ಅತ್ಯಾಚಾರಕ್ಕೊಳಗಾಗಿದ್ದಳು. ಗರ್ಭಪಾತಕ್ಕೆ ಒತ್ತಾಯಿಸಲಾಗಿತ್ತು ಎಂದು ಆಕೆ ಹೇಳಿಕೊಂಡಿದ್ದಾಳೆ. ಮಹಿಳೆ ಯುವಕನ ಮನೆಗೆ ಹೋದಾಗ, ಆಕೆಗೆ ಜೀವ ಬೆದರಿಕೆ ಹಾಕಲಾಗಿದ್ದು, ಊರುಬಿಟ್ಟು ಹೋಗುವಂತೆ ಬೆದರಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದು, ಶಿಕ್ಷಕನ ವಿರುದ್ಧ ಶನಿವಾರ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...