ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮದ್ರಸಾ ಶಿಕ್ಷಕನಿಗೆ 67 ವರ್ಷ ಶಿಕ್ಷೆ ವಿಧಿಸಲಾಗಿದೆ. ಈ ಘಟನೆಯು ಜನವರಿ 19, 2020 ರಂದು ಪೆರುಂಬವೂರ್ ಪಟ್ಟಣದಲ್ಲಿ ನಡೆದಿದೆ.
ಧಾರ್ಮಿಕ ಸಂಸ್ಥೆಯಲ್ಲಿ ತನ್ನ ವಿದ್ಯಾರ್ಥಿಯಾಗಿದ್ದ 11 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ಎರ್ನಾಕುಲಂ ಜಿಲ್ಲೆಯ ನೆಲ್ಲಿಕುಝಿ ಪಟ್ಟಣದ ನಿವಾಸಿ ಅಲಿಯಾರ್ ಎಂದು ಗುರುತಿಸಲಾಗಿದೆ ಎಂದು ಪೆರುಂಬವೂರ್ ಫಾಸ್ಟ್ ಟ್ರ್ಯಾಕ್ ಕೋರ್ಟ್ ಶಿಕ್ಷೆ ವಿಧಿಸಿದೆ. ನ್ಯಾಯಾಲಯ ತೀರ್ಪು ನೀಡುವ ಮೊದಲು, ಶಿಕ್ಷಣ ಸಂಸ್ಥೆಗಳಲ್ಲಿ ಉನ್ನತ ಹುದ್ದೆಯಲ್ಲಿರುವವರು ಜವಾಬ್ದಾರಿಯುತವಾಗಿ ವರ್ತಿಸಬೇಕು. ಇಂತಹ ಕೃತ್ಯಗಳು ಸ್ವೀಕಾರಾರ್ಹವಲ್ಲ ಎಂದು ಹೇಳಿದೆ.
ಆರೋಪಿಯು ಮದರಸಾದ ಕೊಠಡಿಯಲ್ಲಿ ಬಾಲಕನ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ವಯಸ್ಕ ವೀಡಿಯೊಗಳನ್ನು ವೀಕ್ಷಿಸಲು ತನ್ನ ಫೋನ್ ಅನ್ನು ಮಗುವಿಗೆ ನೀಡಿದ್ದಾನೆ ಎಂದು ಹೇಳಲಾಗಿದೆ. ಘಟನೆಯ ನಂತರ ಬಾಲಕ ತನ್ನ ಸ್ನೇಹಿತರು ಮತ್ತು ಶಿಕ್ಷಕರಿಗೆ ತಿಳಿಸಿದ್ದು, ನಂತರ ಪೊಲೀಸರಿಗೆ ದೂರು ದಾಖಲಿಸಲಾಗಿತ್ತು.